ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 125 ಕೆಜಿ ರಕ್ತ ಚಂದನ ವಶ, ಇಬ್ಬರ ಬಂಧನ
ಬೆಂಗಳೂರು ಸಿಐಡಿ ಪೊಲೀಸರ (ಅರಣ್ಯ ಘಟಕ) ತಂಡವು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 125 ಕೆಜಿ ರಕ್ತ ಚಂದನವನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮಂಗಳೂರು: ಬೆಂಗಳೂರು ಸಿಐಡಿ ಪೊಲೀಸರ (ಅರಣ್ಯ ಘಟಕ) ತಂಡವು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 125 ಕೆಜಿ ರಕ್ತ ಚಂದನವನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ರಕ್ತ ಚಂದನವನ್ನು ವೇಣೂರು ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ.
ಆರೋಪಿಗಳನ್ನು ಗುರುವಾಯನಕೆರೆ ನಿವಾಸಿ ದೀಕ್ಷಿತ್ ಮತ್ತು ಮಾವಿನಕಟ್ಟೆಯ ಖಾಲಿದ್ ಎಂದು ಗುರುತಿಸಲಾಗಿದೆ. ಮತ್ತೊಬ್ಬ ಆರೋಪಿ ಸಂತೋಷ್ ತಲೆಮರೆಸಿಕೊಂಡಿದ್ದಾನೆ.
ಖಚಿತ ಮಾಹಿತಿ ಮೇರೆಗೆ ಎಎಸ್‌ಐ ಜಾನಕಿ ನೇತೃತ್ವದ ಬೆಂಗಳೂರು ಅರಣ್ಯ ಸಂಚಾರಿ ದಳದ ತಂಡವು ರಕ್ತ ಚಂದನ ಮತ್ತು ಸಾಗಾಟಕ್ಕೆ ಬಳಸಿದ್ದ ವಾಹನವನ್ನು ಜಪ್ತಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.
ವೇಣೂರು ವಲಯ ಅರಣ್ಯಾಧಿಕಾರಿ ಮಹಿಮ್ ಜನ್ನು ಈ ಸಂಬಂಧ ತನಿಖೆ ಕೈಗೊಂಡಿದ್ದಾರೆ. ವಶಪಡಿಸಿಕೊಂಡ ರಕ್ತ ಚಂದನ ಮತ್ತು ವಾಹನದ ಮೌಲ್ಯ ಸುಮಾರು 6.5 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


