ರಾಜ್ಯ

ಮೌಖಿಕ ಪರೀಕ್ಷೆಯಲ್ಲಿ ಫೇಲ್: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಆತ್ಯಹತ್ಯೆಗೆ ಶರಣು

ಮೌಖಿಕ ಪರೀಕ್ಷೆಯಲ್ಲಿ ಅನುತ್ತೀರ್ಣ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಬೆಳಗಾವಿಯ ಟಿಳಕವಾಡಿಯ ರೈಲ್ವೆ ಗೇಟ್ ಬಳಿ ಗುರುವಾರ ಸಂಜೆ ನಡೆದಿದೆ.

ಮೌಖಿಕ ಪರೀಕ್ಷೆಯಲ್ಲಿ ಫೇಲ್: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಆತ್ಯಹತ್ಯೆಗೆ ಶರಣು
ಸಂಗ್ರಹ ಚಿತ್ರ
Published On :

ಬೆಳಗಾವಿ: ಮೌಖಿಕ ಪರೀಕ್ಷೆಯಲ್ಲಿ ಅನುತ್ತೀರ್ಣ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಬೆಳಗಾವಿಯ ಟಿಳಕವಾಡಿಯ ರೈಲ್ವೆ ಗೇಟ್ ಬಳಿ ಗುರುವಾರ ಸಂಜೆ ನಡೆದಿದೆ.

ಮೃತ ಬಾಲಕಿಯನ್ನು ಬೆಳಗಾವಿಯ ಸಂತ ರೋಹಿದಾಸ್ ನಗರದ ನಿವಾಸಿ ಪ್ರೀತಿ ಅರುಣ್ ಕಾಂಬಳೆ (16) ಎಂದು ಗುರುತಿಸಲಾಗಿದೆ

ಮೌಖಿಕ ಪರೀಕ್ಷೆಯ್ಲಿ ಅನುತ್ತೀರ್ಣಳಾದ ಹಿನ್ನೆಲೆಯಲ್ಲಿ ನೊಂದ ಬಾಲಕಿ ಚಲಿಸುವ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ತಿಳಿದುಬಂದಿದೆ.

ಕಿರಿಯ ಸಹೋದರ ಮತ್ತು ತಾಯಿಯೊಂದಿಗೆ ಬಾಲಕಿ ಸಂತ ರೋಹಿದಾಸ್ ನಗರದಲ್ಲಿ ವಾಸವಿದ್ದಳು. ಶಾಲೆಯಿಂದ ವಾಪಸ್ ಆಗುವ ವೇಳೆ ವಿದ್ಯಾರ್ಥಿ ಚಲಿಸುತ್ತಿದ್ದ ರೈಲನ್ನು ನೋಡಿ, ಹಳಿಗೆ ಹಾರಿದ್ದಾಳೆ. ಇದನ್ನು ಗಮನಿಸಿದ ರೈಲು ನಿರ್ವಾಹಕರು ಕೂಡಲೇ ರೈಲು ನಿಲ್ಲಿಸಲು ಯತ್ನಿಸಿದ್ದಾರೆ. ಆದರೆ, ಸಾಧ್ಯವಾಗಿಲ್ಲ.

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ರೈಲ್ವೇ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಸಂಬಂಧ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.