ಪಡಿತರ ಚೀಟಿದಾರರ ಮನೆ ಬಾಗಿಲಿಗೆ ರೇಷನ್ ವಿತರಿಸುವ ಆಂಧ್ರ ಸರ್ಕಾರದ ವ್ಯವಸ್ಥೆ ಉತ್ತಮವಾಗಿದೆ: ಕೆ ಹೆಚ್ ಮುನಿಯಪ್ಪ
ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ಅಡಿಯಲ್ಲಿ ಪಡಿತರ ಚೀಟಿದಾರರ ಮನೆ ಬಾಗಿಲಿಗೆ ಮೊಬೈಲ್ ವಿತರಣಾ ಘಟಕಗಳ ಮೂಲಕ (Door delivery vehicles) ಪಡಿತರವನ್ನು ತಲುಪಿಸುವ ಆಂಧ್ರಪ್ರದೇಶ ಸರ್ಕಾರದ ವ್ಯವಸ್ಥೆ ಉತ್ತಮವಾಗಿದೆ ಎಂದು ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

ವಿಜಯವಾಡ: ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ಅಡಿಯಲ್ಲಿ ಪಡಿತರ ಚೀಟಿದಾರರ ಮನೆ ಬಾಗಿಲಿಗೆ ಮೊಬೈಲ್ ವಿತರಣಾ ಘಟಕಗಳ ಮೂಲಕ (Door delivery vehicles) ಪಡಿತರವನ್ನು ತಲುಪಿಸುವ ಆಂಧ್ರಪ್ರದೇಶ ಸರ್ಕಾರದ ವ್ಯವಸ್ಥೆ ಉತ್ತಮವಾಗಿದೆ ಎಂದು ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ತಮ್ಮ ವೈಯಕ್ತಿಕ ಕೆಲಸದ ನಿಮಿತ್ತ ವಿಜಯವಾಡಕ್ಕೆ ಬಂದಿದ್ದ ಮುನಿಯಪ್ಪ ಅವರು ನಿನ್ನೆ ಆಂಧ್ರ ಪ್ರದೇಶ ರಾಜ್ಯ ನಾಗರಿಕ ಸರಬರಾಜು ಇಲಾಖೆ ಪ್ರಧಾನ ಕಚೇರಿಗೆ ಭೇಟಿ ನೀಡಿದರು. ಅವರನ್ನು ಸ್ವಾಗತಿಸಿದ ಆಂಧ್ರ ಪ್ರದೇಶ ನಾಗರಿಕ ಸರಬರಾಜು ಸಚಿವ ಕರುಮುರಿ ವೆಂಕಟ ನಾಗೇಶ್ವರ ರಾವ್ ಅವರು ಫಲಾನುಭವಿಗಳ ಮನೆ ಬಾಗಿಲಿಗೆ ಪಡಿತರ ವಿತರಣೆಯನ್ನು ಮಾಡುವ ವ್ಯವಸ್ಥೆಯನ್ನು ವಿವರಿಸಿದರು.
ಮೊಬೈಲ್ ವಿತರಣಾ ಘಟಕಗಳನ್ನು ಪರಿಶೀಲಿಸಿದ ನಂತರ, ಮುನಿಯಪ್ಪ ಅವರು ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ ನಂತರ ಕರ್ನಾಟಕದಲ್ಲಿ ಇದೇ ರೀತಿಯ ವ್ಯವಸ್ಥೆಯನ್ನು ಜಾರಿಗೆ ತರಲು ಪ್ರಯತ್ನಿಸುವುದಾಗಿ ಹೇಳಿದರು.
ಮುನಿಯಪ್ಪ ಅವರು ನಾಗರಿಕ ಸರಬರಾಜು ಗೋದಾಮು ಮತ್ತು ವಿತರಣೆಗೆ ಸಿದ್ಧವಾಗಿರುವ ಪಡಿತರ ದಾಸ್ತಾನು ಪರಿಶೀಲಿಸಿದರು. ಸಾರ್ವಜನಿಕ ಆರೋಗ್ಯಕ್ಕೆ ಒತ್ತು ನೀಡುವ ಮೂಲಕ ರಾಯಲಸೀಮಾ ಪ್ರದೇಶದಲ್ಲಿ ಪ್ರಾಯೋಗಿಕ ಆಧಾರದ ಮೇಲೆ ರಾಗಿ ವಿತರಿಸುವ ಆಂಧ್ರ ಸರ್ಕಾರದ ಉಪಕ್ರಮವನ್ನು ಶ್ಲಾಘಿಸಿದರು.
ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಸಾರವರ್ಧಿತ ಅಕ್ಕಿಯ ಪೂರೈಕೆಯಿಂದ ಜನರು ಹೇರಳವಾದ ಪೋಷಕಾಂಶಗಳನ್ನು ಪಡೆಯುತ್ತಾರೆ ಎಂದು ಗಮನಿಸಿದ ಸಚಿವರು, ಮಧ್ಯಾಹ್ನದ ಊಟದಲ್ಲಿ ಬಲವರ್ಧಿತ ಅಕ್ಕಿಯನ್ನು ನೀಡುವುದರಿಂದ ಶಾಲಾ ಮಕ್ಕಳು ಹೆಚ್ಚು ಆರೋಗ್ಯವಂತರಾಗಿರುತ್ತಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


