ಬೆಂಗಳೂರು: ರಾತ್ರಿ ನಾಪತ್ತೆಯಾಗಿದ್ದ ಯುವತಿ ಮುಂಜಾನೆ ಶವವಾಗಿ ಪತ್ತೆ!
ರಾತ್ರಿ ನಾಪತ್ತೆಯಾಗಿದ್ದ ಯುವತಿಯೊಬ್ಬಳು ಮುಂಜಾನೆ ಮನೆಯ ಹೊರ ಆವರಣದಲ್ಲೇ ಶವವಾಗಿ ಪತ್ತೆಯಾಗಿರುವ ಘಟನೆ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ.

ಬೆಂಗಳೂರು: ರಾತ್ರಿ ನಾಪತ್ತೆಯಾಗಿದ್ದ ಯುವತಿಯೊಬ್ಬಳು ಮುಂಜಾನೆ ಮನೆಯ ಹೊರ ಆವರಣದಲ್ಲೇ ಶವವಾಗಿ ಪತ್ತೆಯಾಗಿರುವ ಘಟನೆ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ.
ಮಹೇಶ್ವರಿ ನಗರ ನಿವಾಸಿ ಮಹಾನಂದಾ (21) ಅನುಮಾನಾಸ್ಪದವಾಗಿ ಮೃತಪಟ್ಟ ಯುವತಿಯಾಗಿದ್ದಾರೆ. ಮೃತ ಯುವತಿ ಹಾಗೂ ಆಕೆಯ ಅಕ್ಕ ಕಳೆದ 3 ಮೂರು ವರ್ಷಗಳಿಂದ ಮಹದೇವಪುರದ ಮಹೇಶ್ವರಿ ನಗರದ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು, ಇಲ್ಲಿನ ಖಾಸಗಿ ಪೆಟ್ರೋಲ್ ಬಂಕ್ ನಲ್ಲಿ ಇಬ್ಬರು ಕೆಲಸ ಮಾಡುತ್ತಿದ್ದರು.
ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಮಹಾನಂದಾ ನಾಪತ್ತೆಯಾದ್ದಳು. ಈ ಸಂಬಂಧ ಯುವತಿಯ ಸಹೋದರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಶುಕ್ರವಾರ ಬೆಳಗಿನ ಜಾನ 5 ಗಂಟೆ ಸುಮಾರಿಗೆ ಮನೆಯ ಹೊರ ಆವರಣದಲ್ಲಿ ಮಹಾನಂದಾ ಮೃತದೇಹ ಪತ್ತೆಯಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಮಹದೇವಪುರ ಠಾಣೆ ಪೊಲೀಸರು, ಪರಿಶೀಲನೆ ನಡೆಸಿದ್ದು, ಈ ವೇಳೆ ಮೃತದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಪತ್ತೆಯಾಗಿಲ್ಲ. ಆದರೆ, ಕತ್ತು ಹಿಸುಕಿ ಉಸಿರುಗಟ್ಟಿಸಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಕೊಲೆಗೆ ನಿಖರ ಕಾರಣಗಳು ತಿಳಿದುಬಂದಿಲ್ಲ.
ಕೊಲೆಗೂ ಮುನ್ನ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ. ಈ ಸಂಬಂಧ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದವರೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


