ತುಮಕೂರು: ಸಿದ್ದಗಂಗಾ ಮಠದ ಗೋಕಟ್ಟೆಯಲ್ಲಿ ಮುಳುಗಿ ನಾಲ್ವರ ದುರ್ಮರಣ
ಕೈಕಾಲು ತೊಳೆಯಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳನ್ನು ರಕ್ಷಿಸಲು ಹೋಗಿ ಒಟ್ಟು ನಾಲ್ವರು ನೀರುಪಾಲಾಗಿರುವ ದಾರುಣ ಘಟನೆ ತುಮಕೂರಿನ ಕ್ಯಾತಸಂದ್ರದಲ್ಲಿರುವ ಸಿದ್ದಗಂಗಾ ಮಠದ ಬಳಿ ನಡೆದಿದೆ.

ತುಮಕೂರು: ಕೈಕಾಲು ತೊಳೆಯಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳನ್ನು ರಕ್ಷಿಸಲು ಹೋಗಿ ಒಟ್ಟು ನಾಲ್ವರು ನೀರುಪಾಲಾಗಿರುವ ದಾರುಣ ಘಟನೆ ತುಮಕೂರಿನ ಕ್ಯಾತಸಂದ್ರದಲ್ಲಿರುವ ಸಿದ್ದಗಂಗಾ ಮಠದ ಬಳಿ ನಡೆದಿದೆ.
ಸಿದ್ದಗಂಗಾ ಮಠದ ಹಿಂಭಾಗದ ನೀರಿನ ಗೋಕಟ್ಟೆಯಲ್ಲಿ ಕೈಕಾಲು ತೊಳೆಯಲು ಹೋಗಿದ್ದ 11 ವರ್ಷದ ಶಂಕರ್ ಮತ್ತು ರಕ್ಷಿತ್ ಮುಳುಗಿದ್ದಾರೆ. ಈ ವೇಳೆ ಜೊತೆಯಲ್ಲಿ ಇದ್ದ ಲಕ್ಷ್ಮಿ ಎಂಬುವರು ರಕ್ಷಿಸಲು ಹೋಗಿ ಮುಳುಗಿದ್ದು ಇದನ್ನು ಕಂಡ ಸ್ಥಳೀಯ ವ್ಯಕ್ತಿ ಮಹಾದೇವಪ್ಪ ಎಂಬುವರು ಸಹ ರಕ್ಷಿಸಲು ಹೋಗಿ ಅವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ವಿದ್ಯಾರ್ಥಿಗಳಾದ ಶಂಕರ್ ಹಾಗೂ ರಕ್ಷಿತ್ ರಾಮನಗರ ನಿವಾಸಿಗಳಾಗಿದ್ದು ಲಕ್ಷ್ಮಿ ನೆಲಮಂಗಲ ಹಾಗೂ ಮಹಾದೇವಪ್ಪ ಯಾದಗಿರಿ ನಿವಾಸಿಯಾಗಿದ್ದಾರೆ. ಅದೃಷ್ಟವಶಾತ್ ನೀರಿಗೆ ಇಳಿದಿದ್ದ ರಂಜಿತ್ ಎಂಬ ಇನ್ನೊಬ್ಬ ವಿದ್ಯಾರ್ಥಿಯನ್ನು ರಕ್ಷಣೆ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


