ನಂದಿಬೆಟ್ಟಕ್ಕೆ ಹೋಗುವಾಗ ನಿದ್ದೆ ಮಂಪರಿನಲ್ಲಿ ಡಿವೈಡರ್ ಗೆ ಕಾರು ಢಿಕ್ಕಿ; ಇಬ್ಬರು ವಿದ್ಯಾರ್ಥಿಗಳ ದುರ್ಮರಣ!
ನಿದ್ದೆ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಡಿವೈಡರ್‌ಗೆ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಯಲಹಂಕ ಸಮೀಪದ ಹುಣಸಮಾರನಹಳ್ಳಿಯಲ್ಲಿ ನಡೆದಿದೆ.

ಬೆಂಗಳೂರು: ನಿದ್ದೆ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಡಿವೈಡರ್‌ಗೆ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಯಲಹಂಕ ಸಮೀಪದ ಹುಣಸಮಾರನಹಳ್ಳಿಯಲ್ಲಿ ನಡೆದಿದೆ.
ಕಳೆದ ರಾತ್ರಿ ಈ ಘಟನೆ ನಡೆದಿದ್ದು ಮೃತರನ್ನು ಕಾರ್ತಿಕ್ ಜೈನ್, ಆದರ್ಶ್ ಕುಮಾರ್ ಎಂದು ಗುರುತಿಸಲಾಗಿದೆ. ಐವರು ವಿದ್ಯಾರ್ಥಿಗಳು ಶನಿವಾರ ತಡರಾತ್ರಿ ನಂದಿ ಬೆಟ್ಟಕ್ಕೆ ಪ್ರವಾಸಕ್ಕೆ ಹೊರಟಿದ್ದರು. ಆದರೆ ಈಗ ಬೇಡ ಬೆಳಗ್ಗೆ ಹೋಗೋಣ ಎಂದು ವಾಪಸ್ ಬರುವಾಗ ಹುಣಸಮಾರನಹಳ್ಳಿ ಬಳಿ ಚಾಲಕ ನಿದ್ದೆ ಮಂಪರಿನಲ್ಲಿ ಡಿವೈಡರ್ ಡಿಕ್ಕಿ ಹೊಡೆದಿದ್ದಾನೆ.
ಇದರಿಂದ ಕಾರ್ತಿಕ್ ಜೈನ್ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಆದರ್ಶ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇನ್ನುಳಿದ ಮೂವರಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


