ವಿಜಯಪುರ: ಹಲ್ಲಿ ಬಿದ್ದಿದ್ದ ಆಹಾರ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ
ಹಲ್ಲಿ ಬಿದ್ದಿದ್ದ ಆಹಾರ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಮುದ್ದೇಬಿಹಾಳ ತಾಲೂಕಿನ ರಕ್ಕಸಗಿ ಗ್ರಾಮದಲ್ಲಿರುವ ಕಸ್ತೂರ ಬಾ ಗಾಂಧಿ ಬಾಲಕಿಯರ ಹಾಸ್ಟೆಲ್ ನಲ್ಲಿ ಸೋಮವಾರ ರಾತ್ರಿ ನಡೆದಿದೆ.

ವಿಜಯಪುರ: ಹಲ್ಲಿ ಬಿದ್ದಿದ್ದ ಆಹಾರ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಮುದ್ದೇಬಿಹಾಳ ತಾಲೂಕಿನ ರಕ್ಕಸಗಿ ಗ್ರಾಮದಲ್ಲಿರುವ ಕಸ್ತೂರ ಬಾ ಗಾಂಧಿ ಬಾಲಕಿಯರ ಹಾಸ್ಟೆಲ್ ನಲ್ಲಿ ಸೋಮವಾರ ರಾತ್ರಿ ನಡೆದಿದೆ.
ಮಧ್ಯಾಹ್ನ ಶಾಲೆಯಿಂದ ಬಂದ ಮೇಲೆ ಊಟ ಮಾಡಿದ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹಾಸ್ಟೆಲ್ ಗೆ ವೈದ್ಯರನ್ನು ಕರೆಯಿಸಿ ಚಿಕಿತ್ಸೆ ನೀಡಲಾಗಿದ್ದು ಸದ್ಯ ಎಲ್ಲರ ಆರೋಗ್ಯ ಸ್ಥಿತಿ ನಿಯಂತ್ರಣದಲ್ಲಿದೆ ಎಂದು ವೈದ್ಯರುತಿಳಿಸಿರುವುದಾಗಿ ವರದಿಯಾಗಿದೆ.
ಘಟನೆ ಬಗ್ಗೆ ಹಾಸ್ಟೆಲ್ ವಾರ್ಡನ್, ಅಡುಗೆ ಸಿಬ್ಬಂದಿ ಜೊತೆಗೆ ಗ್ರಾಮಸ್ಥರು ವಾಗ್ವಾದ ನಡೆಸಿದ್ದು, ತಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


