ಕರಾಳ ಶನಿವಾರ: 24 ಗಂಟೆಗಳಲ್ಲಿ ಸಂಭವಿಸಿದ ಅಪಘಾತಗಳಿಗೆ 37 ಮಂದಿ ಸಾವು; ಅಲೋಕ್ ಕುಮಾರ್ ಸಲಹೆಗಳೇನು?
ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ 6 ಗಂಟೆವರೆಗಿನ ಅವಧಿಯಲ್ಲಿ ಸಂಭವಿಸಿರುವ ಅಪಘಾತಗಳಲ್ಲಿ 37 ಮಂದಿ ಮೃತಪಟ್ಟಿದ್ದಾರೆ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

ಬೆಂಗಳೂರು: ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ 6 ಗಂಟೆವರೆಗಿನ ಅವಧಿಯಲ್ಲಿ ಸಂಭವಿಸಿರುವ ಅಪಘಾತಗಳಲ್ಲಿ 37 ಮಂದಿ ಮೃತಪಟ್ಟಿದ್ದಾರೆ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
‘Black staurday’ ಎಂಬುದಾಗಿ ಟ್ವೀಟ್ ಮಾಡಿರುವ ಅವರು, ‘ಭಾನುವಾರ ನಸುಕಿನಲ್ಲಿ ಚಿತ್ರದುರ್ಗದಲ್ಲಿ ಐವರು ಸಾವಿಗೀಡಾಗಿದ್ದಾರೆ. ಇದರಿಂದಾಗಿ, ರಾಜ್ಯದಲ್ಲಿ 24 ಗಂಟೆಯಲ್ಲಿ 37 ಮಂದಿ ಪ್ರಾಣ ಕಳೆದುಕೊಂಡಂತಾಗಿದೆ’ ಎಂದು ಬರೆದುಕೊಂಡಿದ್ದಾರೆ.
ಅಪಘಾತಗಳ ಬಗ್ಗೆ ಬೇಸರ ವ್ಯಕ್ತ ಪಡಿಸಿರುವ ಅಲೋಕ್ ಕುಮಾರ್ ಪ್ರಯಾಣಿಕರಿಗೆ ಕೆಲವೊಂದು ಸಲಹೆ ನೀಡಿದ್ದಾರೆ, ಮೃತರಲ್ಲಿ ದ್ವಿಚಕ್ರ ವಾಹನ ಸವಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕಾರು ಪ್ರಯಾಣಿಕರು ಹಾಗೂ ಪಾದಚಾರಿಗಳು ಸಹ ಮೃತಪಟ್ಟಿದ್ದಾರೆ.
ಬೈಕ್ ಸವಾರ ಹಾಗೂ ಹಿಂಬದಿ ಸವಾರ, ತಮ್ಮ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸಿ ಸಂಚರಿಸಬೇಕು. ಅನನುಭವಿ ಚಾಲಕರು ರಾತ್ರಿ ಚಾಲನೆಯನ್ನು ತಪ್ಪಿಸಬೇಕು ಎಂದು ಸಲಹೆ ನೀಡಿ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


