ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ: ಆರೋಪಿ ಪ್ರಾಂಶುಪಾಲರ ಶಾಲೆಯನ್ನೇ ಮುಚ್ಚಿಸಿದ ಶಿಕ್ಷಣ ಇಲಾಖೆ
ಬೆಂಗಳೂರಿನ ವರ್ತೂರು ಪ್ರದೇಶದಲ್ಲಿ 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಶಾಲೆಯ ಮಾಲೀಕ- ಪ್ರಾಂಶುಪಾಲರನ್ನು ಬಂಧಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ಶಿಕ್ಷಣ ಇಲಾಖೆ ಶಾಲೆಗೆ ಬೀಗ ಹಾಕಿದೆ ಎಂದು ಮೂಲಗಳು ಸೋಮವಾರ ಖಚಿತಪಡಿಸಿವೆ.

ಬೆಂಗಳೂರು: ಬೆಂಗಳೂರಿನ ವರ್ತೂರು ಪ್ರದೇಶದಲ್ಲಿ 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಶಾಲೆಯ ಮಾಲೀಕ- ಪ್ರಾಂಶುಪಾಲರನ್ನು ಬಂಧಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ಶಿಕ್ಷಣ ಇಲಾಖೆ ಶಾಲೆಗೆ ಬೀಗ ಹಾಕಿದೆ ಎಂದು ಮೂಲಗಳು ಸೋಮವಾರ ಖಚಿತಪಡಿಸಿವೆ.
ಮೂಲಗಳ ಪ್ರಕಾರ ಆರೋಪಿಗಳು ಕೋರಮಂಗಲ ಪ್ರದೇಶದಲ್ಲಿ ಶಾಲೆ ನಿರ್ಮಿಸಲು ಅನುಮತಿ ಪಡೆದಿದ್ದರು, ಆದರೆ ವರ್ತೂರಿನಲ್ಲಿ ಅನಧಿಕೃತವಾಗಿ ಶಾಲೆಯನ್ನು ನಿರ್ಮಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಬ್ಲಾಕ್ ಶಿಕ್ಷಣಾಧಿಕಾರಿ (ಬಿಇಒ) ಆದೇಶ ಹೊರಡಿಸಿದ್ದಾರೆ. ಈ ಬೆಳವಣಿಗೆಯಿಂದಾಗಿ ಈ ಶಾಲೆಯಲ್ಲಿ ಓದುತ್ತಿರುವ 140 ವಿದ್ಯಾರ್ಥಿಗಳು ಹಾಗೂ ಅವರ ಪಾಲಕರು ಗೊಂದಲಕ್ಕೀಡಾಗಿದ್ದು, ಶಾಲೆಯ ಬದಲಿ ಬಗ್ಗೆ ಚಿಂತಿಸಿದ್ದಾರೆ. ಆ ಪ್ರದೇಶದಲ್ಲಿ ತಾವು ಆಯ್ಕೆ ಮಾಡಿದ ಶಾಲೆಯಲ್ಲಿ ತಮ್ಮ ಮಕ್ಕಳಿಗೆ ಸೀಟು ದೊರಕಿಸಿಕೊಡುವುದಾಗಿ ಹಾಗೂ ಶುಲ್ಕವನ್ನು ಸರ್ಕಾರವೇ ನಿಗದಿಪಡಿಸಲಿದೆ ಎಂದು ಅಧಿಕಾರಿಗಳು ಪೋಷಕರಿಗೆ ಭರವಸೆ ನೀಡಿದ್ದಾರೆ ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.
ಪರ್ಯಾಯ ಶಾಲೆಗಳನ್ನು ಆಯ್ಕೆ ಮಾಡಿ ತಮ್ಮ ಮಕ್ಕಳಿಗೆ ಪ್ರವೇಶ ನೀಡುವಂತೆ ಪೋಷಕರಿಗೆ ತಿಳಿಸಲಾಗಿದೆ. 2ನೇ ತರಗತಿ ಓದುತ್ತಿದ್ದ ಹತ್ತು ವರ್ಷದ ಬಾಲಕಿಯ ಮೇಲೆ ಪ್ರಾಂಶುಪಾಲರು ಆಗಸ್ಟ್ 3ರಂದು ಅತ್ಯಾಚಾರವೆಸಗಿದ್ದರು. ಪೋಷಕರ ದೂರಿನ ಮೇರೆಗೆ ಪೊಲೀಸರು ಆರೋಪಿ ಪ್ರಾಂಶುಪಾಲನನ್ನು ಬಂಧಿಸಿದ್ದರು.
ಪೊಲೀಸರ ಪ್ರಕಾರ, ಈ ಘಟನೆ ಬಳಿಕ ಸಂತ್ರಸ್ಥ ಬಾಲಕಿ ಡಿಸ್ಲೆಕ್ಸಿಯಾ ಸಮಸ್ಯೆಯಿಂದಿಂದ ಬಳಲುತ್ತಿದ್ದಳು. ಬೆಳಗ್ಗೆ 8.30ಕ್ಕೆ ಬಾಲಕಿ ಶಾಲೆಗೆ ಹೋಗಿದ್ದ ವೇಳೆ ಈ ಘಟನೆ ನಡೆದಿದ್ದು, ಆರೋಪಿ ಪ್ರಾಂಶುಪಾಲರು ಶಾಲೆಯ ಪಕ್ಕದಲ್ಲೇ ಇರುವ ತನ್ನ ಮನೆಗೆ ಕರೆದುಕೊಂಡು ಹೋಗಿ ಕೃತ್ಯ ಎಸಗಿದ್ದಾರೆ. ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಬಳಿಕ ಆರೋಪಿಗಳು ಕೇಕ್ ನೀಡಿದ್ದರು. ಮನೆಗೆ ಬಂದ ಬಾಲಕಿ ಹೊಟ್ಟೆ ನೋವಿನ ಬಗ್ಗೆ ಪೋಷಕರಿಗೆ ದೂರು ನೀಡಿದ್ದಾಳೆ.
ಅಂಡರ್‌ವೇರ್‌ನಲ್ಲಿ ರಕ್ತಸ್ರಾವವಾಗುತ್ತಿರುವುದನ್ನು ಗಮನಿಸಿದ ತಾಯಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ನಂತರ, ಕ್ರಮೇಣ, ಹುಡುಗಿ ತನ್ನ ತಾಯಿಗೆ ನಡೆದ ಘಟನೆಗಳೆಲ್ಲವನ್ನೂ ಬಹಿರಂಗಪಡಿಸಿದಳು. ನಂತರ ಬಾಲಕಿಯ ಪೋಷಕರು ಪ್ರಕರಣ ದಾಖಲಿಸಿದ್ದು, ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


