ಭಾಷಣದ ವೇಳೆ ಬುಲೆಟ್ ಪ್ರೂಫ್ ಗ್ಲಾಸ್ ತೆಗೆಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದ್ದು, ಧ್ವಜಾರೋಹಣ ನೆರವೇರಿಸಿ ನಾಡಿನ ಜನತೆಯನ್ನುದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು.

ಬೆಂಗಳೂರು: ಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದ್ದು, ಧ್ವಜಾರೋಹಣ ನೆರವೇರಿಸಿ ನಾಡಿನ ಜನತೆಯನ್ನುದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ತೆರೆದ ಜೀಪ್ನಲ್ಲಿ ಪರೇಡ್ ಪರಿವೀಕ್ಷಣೆ ಮಾಡಿ, ಗೌರವ ರಕ್ಷೆ ಸ್ವೀಕಾರ ಮಾಡಿದರು.
ಗೌರವ ರಕ್ಷೆ ಸ್ವೀಕಾರದ ಬಳಿಕ ರಾಜ್ಯದ ಜನರನ್ನು ಉದ್ದೇಶಿಸಿ ಮುಖ್ಯಮಂತ್ರಿಗಳು ಮಾತನಾಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಭಾಷಣಕ್ಕೆ ಬುಲೆಟ್ ಪ್ರೂಫ್ ಗ್ಲಾಸ್ ಅಳವಡಿಸಲಾಗಿತ್ತು. ಅದನ್ನು ಗಮನಿಸಿದ ಮುಖ್ಯಮಂತ್ರಿಗಳು, ಬುಲೆಟ್ ಪ್ರೂಫ್ ಗ್ಲಾಸ್ ತೆರವು ಮಾಡುವಂತೆ ಸೂಚಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಅಧಿಕಾರಿಗಳು ಕೂಡಲೇ ಬುಲೆಟ್ ಪ್ರೂಫ್ ಗ್ಲಾಸ್ ತೆಗೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


