ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ರಾಜ್ಯದ ರೈತರ ಹಿತ ಕಾಪಾಡುವಂತೆ ಸಿಎಂಗೆ ಬೊಮ್ಮಾಯಿ ಪತ್ರ
ತಮಿಳುನಾಡು ಸರ್ಕಾರ ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದಿದ್ದು, ಈ ನಡುವಲ್ಲೇ ರಾಜ್ಯದ ರೈತರ ಹಿತ ಕಾಪಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಯವರು ಒತ್ತಾಯಿಸಿದ್ದಾರೆ.

ಬೆಂಗಳೂರು: ತಮಿಳುನಾಡು ಸರ್ಕಾರ ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದಿದ್ದು, ಈ ನಡುವಲ್ಲೇ ರಾಜ್ಯದ ರೈತರ ಹಿತ ಕಾಪಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಯವರು ಒತ್ತಾಯಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ತಮಿಳುನಾಡಿಗೆ ನೈಋುತ್ಯ ಮತ್ತು ಈಶಾನ್ಯ ಮನ್ಸೂನ್ ಮಳೆಯಾಗುತ್ತಿರುವುದರಿಂದ ನಾವು ನೀರು ಬಿಡಲು ಸಾಧ್ಯವಿಲ್ಲ. ಈ ವಾಸ್ತವಾಂಶದ ಮೇಲೆ ನಾವು ಗಟ್ಟಿನಿಲುವು ತೆಗೆದುಕೊಳ್ಳಬೇಕು. ತಮಿಳುನಾಡು ಮತ್ತೆ ಕ್ಯಾತೆ ತೆಗೆದಿರುವುದು ನಿಮ್ಮ ಗಮನಕ್ಕೆ ಬಂದಿದೆ ಎಂದು ಭಾವಿಸಿದ್ದೇನೆ. ತಮಿಳುನಾಡು ಸುಪ್ರೀಂಕೋರ್ಚ್‌ಗೆ ಹೋಗಬಹುದೆಂದು ಮಾಧ್ಯಮದಲ್ಲಿ ಗಮನಿಸಿದ್ದೇವೆ. ಈ ವಿಚಾರದಲ್ಲಿ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆ ಇರುವುದನ್ನು ಲೆಕ್ಕಿಸದೆ ಸಿಡಬ್ಲೂಡಿಟಿ ಆದೇಶ ಉಲ್ಲಂಘನೆ ಮಾಡಿ ನಾಲ್ಕು ಪಟ್ಟು ಕುರುವೈ ಪ್ರದೇಶ ಬೆಳೆಗೆ ನೀರನ್ನು ಒದಗಿಸಿದೆ.
ಇದನ್ನು ನಮ್ಮ ಅಧಿಕಾರಿಗಳು ಸಿಡಬ್ಲೂಎಂಎದಲ್ಲಿ ಪ್ರತಿಭಟಿಸದೆ ಸುಮ್ಮನೆ ಇದ್ದದ್ದು ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗಿದೆ. ಈಗಿರುವ ನಮ್ಮ ನಾಲ್ಕು ಜಲಾಶಯಗಳ ನೀರಿನ ಮಟ್ಟಬೆಂಗಳೂರು ನಗರ, ಕಾವೇರಿ ಜಲಾನಯನ ಪ್ರದೇಶದ ನಗರ ಮತ್ತು ಗ್ರಾಮಗಳ ಕುಡಿಯುವ ನೀರಿಗೆ ಕೊರತೆಯಾಗುತ್ತದೆ. ಅದೇ ರೀತಿ ಕಾವೇರಿ ಜಲಾನಯನ ಪ್ರದೇಶದ ಖಾರಿಫ್ ಬೆಳೆಗಳಿಗೆ ನೀರಿನ ಕೊರತೆಯಾಗುತ್ತದೆ. ಹೀಗಾಗಿ ನೀರು ಬಿಡುವುದು ಕರ್ನಾಟಕದ ಜನತೆ ಮತ್ತು ರೈತರನ್ನು ಸಂಕಷ್ಟಕ್ಕೀಡು ಮಾಡುತ್ತದೆ. ಕಾವೇರಿ ಜಲಾನಯನ ಪ್ರದೇಶದ ನೀರಿನ ಹಿತಾಸಕ್ತಿ ಕಾಪಾಡುತ್ತೀರೆಂದು ನಂಬಿರುವೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


