ನಮ್ಮ ಮೆಟ್ರೋ: ಮೈಸೂರು ರಸ್ತೆಯಿಂದ ಕೆಂಗೇರಿಯವರೆಗೆ ನಾಳೆ ಮೆಟ್ರೋ ರೈಲು ಸಂಚಾರ ಸ್ಥಗಿತ
ಮೆಟ್ರೋ ನೇರಳೆ ಮಾರ್ಗದಲ್ಲಿ ವಿಸ್ತರಿತ ಸಂಚಾರದ ಕಾಮಗಾರಿಗಾಗಿ ಮೈಸೂರು ರಸ್ತೆಯಿಂದ ಕೆಂಗೇರಿಯವರೆಗೆ ನಾಳೆ ಮೆಟ್ರೋ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಬೆಂಗಳೂರು: ಮೆಟ್ರೋ ನೇರಳೆ ಮಾರ್ಗದಲ್ಲಿ ವಿಸ್ತರಿತ ಸಂಚಾರದ ಕಾಮಗಾರಿಗಾಗಿ ಮೈಸೂರು ರಸ್ತೆಯಿಂದ ಕೆಂಗೇರಿಯವರೆಗೆ ನಾಳೆ ಮೆಟ್ರೋ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ವಿಸ್ತರಿತ ಮಾರ್ಗಲ್ಲಿ ಸಿಗ್ನಲಿಂಗ್ ಮತ್ತಿತರ ಕಾಮಗಾರಿಗಳು ನಡೆಯುತ್ತಿರುವುದರಿಂದ ಈ ವ್ಯತ್ಯಯವಾಗಲಿದೆ. ಮೈಸೂರು ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಬೆಳಗ್ಗೆ 5.00 ರಿಂದ ರಾತ್ರಿ 11.00 ರವರೆಗೆ ರೈಲು ಸೇವೆಗಳು ಲಭ್ಯವಿರುತ್ತದೆ.
ಆಗಸ್ಟ್ 23 ಮತ್ತು 24 ರಂದು ಬೆಳಗ್ಗೆ 5 ರಿಂದ ಬೆಳಗ್ಗೆ 7ರವರೆಗೂ ಇದೇ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಇರುವುದಿಲ್ಲ. ಬೆಳಗ್ಗೆ 7 ರ ನಂತರ ಎಂದಿನಂತೆ ಸಂಚಾರ ಇರಲಿದೆ.

ಆಗಸ್ಟ್ 20 ರಿಂದ 29ರವೆರೆಗೆ ಇದೇ ಮಾರ್ಗದ ಸ್ವಾಮಿ ವಿವೇಕಾನಂದ ರಸ್ತೆ- ಬೈಯಪ್ಪನಹಳ್ಳಿ - ಕೆಆರ್ ಪುರ-ವೈಟ್ ಫೀಲ್ಡ್ ನಡುವೆ ಬೆಳಿಗ್ಗೆ 5 ರಿಂದ 7ರವರೆಗೆ ರೈಲು ಸಂಚಾರ ಇರುವುದಿಲ್ಲ. ಹಸಿರು ಮಾರ್ಗದಲ್ಲಿ ಯಾವುದೇಬದಲಾವಣೆಗಳು ಇರುವುದಿಲ್ಲ ಎಂದು ಬಿಎಂಆರ್ ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


