ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ CISF ಪೊಲೀಸರ ಮೇಲೆ ಹಲ್ಲೆ ನಡೆಸಿದ ಮಹಿಳೆ ಬಂಧನ
ವಿಮಾನ ಹತ್ತುವ ಮುನ್ನ ಕಡ್ಡಾಯ ತಪಾಸಣೆಗೆ ಒಳಪಡಲು ನಿರಾಕರಿಸಿ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದ 31 ವರ್ಷದ ಮಹಿಳೆಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ವಿಮಾನ ಹತ್ತುವ ಮುನ್ನ ಕಡ್ಡಾಯ ತಪಾಸಣೆಗೆ ಒಳಪಡಲು ನಿರಾಕರಿಸಿ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದ 31 ವರ್ಷದ ಮಹಿಳೆಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2ನಲ್ಲಿ ಈ ಘಟನೆ ನಡೆದಿತ್ತು. ಪ್ರಯಾಣಿಕೆ ನೇಹಾ ಗುಪ್ತಾ ವಿರುದ್ಧ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಸಿಬ್ಬಂದಿ ಸುಶೀಲಾ ನೀಡಿದ ದೂರಿನ ಮೇರೆಗೆ ಆಕೆಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಅಲ್ಲದೆ ಆಕೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನೇಹಾ ವಿರುದ್ಧ ಐಪಿಸಿಯ ಸೆಕ್ಷನ್ 353 ಮತ್ತು ಸೆಕ್ಷನ್ 323ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪೊಲೀಸರ ಪ್ರಕಾರ, ನೇಹಾ ಏರ್ ಏಷ್ಯಾ ವಿಮಾನದ ಮೂಲಕ ಪಶ್ಚಿಮ ಬಂಗಾಳದ ಬಾಗ್ಡೋಗ್ರಾಕ್ಕೆ ಪ್ರಯಾಣಿಸಬೇಕಿತ್ತು. ಆಕೆ ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದಳು. ಆಕೆ ತನ್ನ ಲಗೇಜ್ ಅನ್ನು ಚೆಕ್‌ಗಳಿಗಾಗಿ ಬ್ಯಾಗೇಜ್ ಸ್ಕ್ಯಾನರ್‌ನಲ್ಲಿ ಇರಿಸಿದ್ದರು. ನಂತರ ದೈಹಿಕ ತಪಾಸಣೆಗಾಗಿ ಲೇಡೀಸ್ ಫ್ರಿಸ್ಕಿಂಗ್ ಬೂತ್‌ಗೆ ಹೋಗುವಂತೆ ಮಾರ್ಗದರ್ಶನ ನೀಡಲಾಯಿತು. ಈ ವೇಳೆ ದೈಹಿಕ ಪರೀಕ್ಷೆಗೆ ಸಹಕರಿಸಲು ನಿರಾಕರಿಸಿ ಸಿಐಎಸ್‌ಎಫ್ ಸಿಬ್ಬಂದಿ ಸುಶೀಲಾ ಮೇಲೆ ಹಲ್ಲೆ ನಡೆಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ನೇಹಾ ಗುಪ್ತಾ ಭದ್ರತಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಸಿಐಎಸ್ಎಫ್ ಉನ್ನತ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


