ಡಿ. ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ಆಯ್ಕೆ
ಹಿರಿಯ ರಾಜಕಾರಣಿ, ಮಾಜಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರನ್ನು ಈ ಬಾರಿಯ ಡಿ. ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಬೆಂಗಳೂರು: ಹಿರಿಯ ರಾಜಕಾರಣಿ, ಮಾಜಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರನ್ನು ಈ ಬಾರಿಯ ಡಿ. ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಾಹಿತಿ ಹಿ.ಶಿ. ರಾಮಚಂದ್ರೇಗೌಡ ಅವರ ನೇತೃತ್ವದ ಆಯ್ಕೆ ಸಮಿತಿಯು ಕಾಗೋಡು ತಿಮ್ಮಪ್ಪ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್.ತಂಗಡಗಿ ತಿಳಿಸಿದ್ದಾರೆ.
ಪ್ರಶಸ್ತಿಯು 5 ಲಕ್ಷ ರೂಪಾಯಿ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ಆ.20ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬೆಳಗ್ಗೆ 11 ಗಂಟೆಗೆ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 108ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಗೋಡು ತಿಮ್ಮಪ್ಪ ಅವರಿಗ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಗೋಡು ತಿಮ್ಮಪ್ಪ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ದೇವರಾಜ ಅರಸು ಅವರ ಗರಡಿಯಲ್ಲಿಯೇ ಬೆಳೆದಿರುವ ತಿಮ್ಮಪ್ಪನವರು ಭೂ ಸುಧಾರಣಾ ಕಾಯ್ದೆಯಷ್ಟೇ ಕ್ರಾಂತಿಕಾರಿಯಾದ "ವಾಸಿಸುವವನನ್ನೇ ಮನೆ ಒಡೆಯ" ನನ್ನಾಗಿ ಮಾಡುವ ಕ್ರಾಂತಿಕಾರಿ ಕಾಯ್ದೆಯ ರೂವಾರಿ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


