14 ಸರ್ಕಾರಿ ಅಧಿಕಾರಿಗಳ ಕಚೇರಿ, ಮನೆ ಮೇಲೆ ಲೋಕಾಯುಕ್ತ ದಾಳಿ, 13 ಕೇಸ್ ದಾಖಲು
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಗುರುವಾರ ರಾಜ್ಯ ಸರ್ಕಾರದ 14 ಅಧಿಕಾರಿಗಳಿಗೆ ಸೇರಿದ 45 ಸ್ಥಳಗಳ ಮೇಲೆ ದಾಳಿ ನಡೆಸಿದ್ದು, ಇದುವರೆಗೆ 13 ಪ್ರಕರಣಗಳನ್ನು ದಾಖಲಿಸಿದ್ದಾರೆ.

ಬೆಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಗುರುವಾರ ರಾಜ್ಯ ಸರ್ಕಾರದ 14 ಅಧಿಕಾರಿಗಳಿಗೆ ಸೇರಿದ 45 ಸ್ಥಳಗಳ ಮೇಲೆ ದಾಳಿ ನಡೆಸಿದ್ದು, ಇದುವರೆಗೆ 13 ಪ್ರಕರಣಗಳನ್ನು ದಾಖಲಿಸಿದ್ದಾರೆ.
ಲೋಕಾಯುಕ್ತ ಕಚೇರಿಯ ಪ್ರಕಟಣೆ ಪ್ರಕಾರ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಂದಾಯ ನಿರೀಕ್ಷಕ ಎಸ್.ನಟರಾಜ್, ತಹಶೀಲ್ದಾರ್ ಶಿವರಾಜು, ಚಿಕ್ಕಜಾಲ ಗ್ರಾಮ ಪಂಚಾಯಿತಿ ಸದಸ್ಯ ಲಕ್ಷ್ಮೀಪತಿ, ತುಮಕೂರು ಜಿಲ್ಲಾ ಪಂಚಾಯಿತಿ ಕುಂದುಕೊರತೆ ನಿವಾರಣಾ ವೇದಿಕೆ ಮುಖ್ಯಸ್ಥ ಭುವನಹಳ್ಳಿ ನಾಗರಾಜ್, ಬಿಬಿಎಂಪಿ ಕೆರೆ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಎಸ್.ಭಾರತಿ, ಚಿತ್ರದುರ್ಗದ ಸಹಾಯಕ ಎಂಜಿನಿಯರ್ ಕೆ.ಮಹೇಶ್, ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಜಂಟಿ ನಿರ್ದೇಶಕ ಕೆ.ಎನ್.ನಾಗರಾಜು, ಮಡಿಕೇರಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ನೀರಾವರಿ ಇಲಾಖೆ ಕೊಡಗು ಅಧೀಕ್ಷಕ ಎಂಜಿನಿಯರ್ ಕೆ.ಕೆ.ರಘುಪತಿ ಸೇರಿದಂತೆ 14 ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಉಳಿದಂತೆ ಆರ್‌ಎಫ್‌ಒ ಎಸ್.ಸತೀಶ್, ಕೊಪ್ಪಳ ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ಮಂಜುನಾಥ, ಬೀದರ್ ಪೊಲೀಸ್ ಪೇದೆ ವಿಜಯಕುಮಾರ್, ಬೆಳಗಾವಿ ಮಹಾನಗರ ಪಾಲಿಕೆ ಆರ್‌ಐ ಸಂತೋಷ ಶರಣಪ್ಪ ಅನ್ನಿಶೆಟ್ಟಿ, ಧಾರವಾಡ ಪೊಲೀಸ್ ಪೇದೆ ಶಿವಾನಂದ ಮಾನಕರ ಅವರ ಮೇಲೂ ದಾಳಿ ನಡೆಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಇದನ್ನು ಓದಿ: ಸಾರ್ವಜನಿಕರಿಂದ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ವ್ಯಾಪಕ ದೂರು ಬಂದ ಹಿನ್ನೆಲೆ ಲೋಕಾಯುಕ್ತ ಸಾಮೂಹಿಕ ದಾಳಿ
ಇಂದು ಬೆಳಗ್ಗೆ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ, ಶೋಧ ನಡೆಸಲಾಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


