ರಾಜ್ಯ

ಬೆಳಗಾವಿ: ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅನುತ್ತೀರ್ಣ; ಮನನೊಂದು 24 ವರ್ಷದ ಯುವಕ ಆತ್ಮಹತ್ಯೆ!

ಪದೇ ಪದೆ ಪ್ರಯತ್ನಿಸಿದರೂ ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣನಾಗದಿದ್ದಕ್ಕೆ ಮನನೊಂದು ನಿಪ್ಪಾಣಿ ತಾಲೂಕಿನಲ್ಲಿ ಗುರುವಾರ 24 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಬೆಳಗಾವಿ: ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅನುತ್ತೀರ್ಣ; ಮನನೊಂದು 24 ವರ್ಷದ ಯುವಕ ಆತ್ಮಹತ್ಯೆ!
ಪ್ರಾತಿನಿಧಿಕ ಚಿತ್ರ
Published On :

ಬೆಳಗಾವಿ: ಪದೇ ಪದೆ ಪ್ರಯತ್ನಿಸಿದರೂ ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣನಾಗದಿದ್ದಕ್ಕೆ ಮನನೊಂದು ನಿಪ್ಪಾಣಿ ತಾಲೂಕಿನಲ್ಲಿ ಗುರುವಾರ 24 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಮೃತನನ್ನು ಬೆಳಗಾವಿ ಸಮೀಪದ ನಿಪ್ಪಾಣಿ ತಾಲೂಕಿನ ಹಂಚಿನಾಳ್ ಗ್ರಾಮದ ನಿವಾಸಿ ಅಪ್ಪಾಸೊ ಶಿವಾಜಿ ಪಾನಡೆ ಎಂದು ಗುರುತಿಸಲಾಗಿದೆ.

ಯುವಕ ಬಾಲ್ಯದಿಂದಲೂ ಸೇನೆಗೆ ಸೇರುವ ಕನಸನ್ನು ಹೊಂದಿದ್ದನು ಮತ್ತು ಅದಕ್ಕಾಗಿ ತಯಾರಿ ನಡೆಸುತ್ತಿದ್ದನು. ಆತ ಮಹಾರಾಷ್ಟ್ರದ ಖಾಸಗಿ ಕಾರ್ಖಾನೆಯಲ್ಲಿ ಎರಡು ವರ್ಷ ಕೆಲಸ ಮಾಡಿದ್ದನು. ಆದಾಗ್ಯೂ, ಆತ ಸೇನೆಗೆ ಸೇರಲು ಹಲವು ಬಾರಿ ಮಾಡಿದ ಪ್ರಯತ್ನಗಳು ವಿಫಲವಾಗಿದ್ದವು.

ಈ ವೈಫಲ್ಯವನ್ನು ಸಹಿಸಲಾಗದ ಯುವಕ ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ನಿಪ್ಪಾಣಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.