ಆಕ್ರೋಶಕ್ಕೆ ಹೆದರಿದ ಸರ್ಕಾರ: ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಅನುದಾನ ತಡೆ ಆದೇಶ ವಾಪಸ್!
ಕರ್ನಾಟಕದ ದೇವಸ್ಥಾನಗಳ ಜೀರ್ಣೋದ್ದಾರ ಅನುದಾನ ತಡೆ ಹಿಡಿದು ಆದೇಶ ಹೊರಡಿಸಿರುವುದು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಎಚ್ಚೆತ್ತುಕೊಂಡಿದ್ದು, ಕೂಡಲೇ ಅನುದಾನಕ್ಕೆ ತಡೆ ನೀಡಿದ್ದ ಆದೇಶ ಹಿಂಪಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು: ಕರ್ನಾಟಕದ ದೇವಸ್ಥಾನಗಳ ಜೀರ್ಣೋದ್ದಾರ ಅನುದಾನ ತಡೆ ಹಿಡಿದು ಆದೇಶ ಹೊರಡಿಸಿರುವುದು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಎಚ್ಚೆತ್ತುಕೊಂಡಿದ್ದು, ಕೂಡಲೇ ಅನುದಾನಕ್ಕೆ ತಡೆ ನೀಡಿದ್ದ ಆದೇಶ ಹಿಂಪಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಅನುದಾನ ತಡೆ ಹಿಡಿಯುವಂತೆ ಧಾರ್ಮಿಕ ದತ್ತಿ ಇಲಾಖೆ ಆದೇಶಿಸಿದೆ, 2022-23ನೇ ಸಾಲಿನಲ್ಲಿ ಬಿಡುಗಡೆಯಾಗಿರುವ ಅನುದಾನದಲ್ಲಿ, ದೇವಸ್ಥಾನ ಜೀರ್ಣೋದ್ದಾರ ಕಾಮಗಾರಿ ಇನ್ನೂ ಪ್ರಾರಂಭ ಆಗದಿದ್ದರೆ ಹಣ ಬಿಡುಗಡೆ ಮಾಡಬಾರದು, ಶೇ 50 ರಷ್ಟು ಹಣ ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದರೆ ತಕ್ಷಣ ಅನುದಾನ ತಡೆ ಹಿಡಿಯಬೇಕು, ಅನುದಾನದ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದರೆ ಆಡಳಿತಾತ್ಮಕ ಮಂಜೂರಾತಿಯನ್ನು ತಡೆಹಿಡಿಯಬೇಕು ಎನ್ನುವ ಮೂರು ವಿಷಯಗಳನ್ನು ಪ್ರಸ್ತಾಪಿಸಿ ದೇವಸ್ಥಾನಗಳ ಜೀರ್ಣೋದ್ಧಾರ ಅನುದಾನ ಬಿಡುಗಡೆ ತಡೆಹಿಡಿಯಬೇಕು ಎಂದು ಧಾರ್ಮಿಕ ದತ್ತಿ ಇಲಾಖೆ ಆದೇಶ ನೀಡಿತ್ತು.
ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ, ದೇಗುಲಗಳ ಅನುದಾನಕ್ಕೆ ತಡೆ ನೀಡಿದ್ದ ಆದೇಶ ವಾಪಸ್ ಪಡೆಯುವಂತೆ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ಮುಜರಾಯಿ ಇಲಾಖೆ ಆಯುಕ್ತರು ಕನ್ಫ್ಯೂಸ್ ಆಗಿದ್ದಾರೆ ಅಷ್ಟೇ.
ಇಲಾಖೆಯಲ್ಲಿ ಅಕ್ರಮ ನಡೆದಿದೆ ಎಂಬ ಯಾವ ಅನುಮಾನವೂ ಇಲ್ಲ. ಯಾವ ದೇವಸ್ಥಾನದ ಕೆಲಸವನ್ನೂ ನಿಲ್ಲಿಸುವುದಕ್ಕೆ ಹೋಗುವುದಿಲ್ಲ. ಸ್ಟೇಟಸ್ ರಿಪೋರ್ಟ್ ಕೇಳಿದ್ದಕ್ಕೆ ಕನ್ಫ್ಯೂಸ್ ಮಾಡಿಕೊಂಡಿಕೊಂಡು ನಮ್ಮ ಇಲಾಖೆಯ ಆಯುಕ್ತರು ತಪ್ಪಾಗಿ ಅರ್ಥ ಮಾಡಿಕೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


