ರಾಜ್ಯ

ತಮಿಳುನಾಡಿಗೆ ಕಾವೇರಿ ನೀರು: ಸರ್ಕಾರದ ವಿರುದ್ಧ ಭುಗಿಲೆದ್ದ ಪ್ರತಿಭಟನೆ, ಹಿಡಿಶಾಪ ಹಾಕಿದ ರೈತರು

ನೆರೆ ರಾಜ್ಯ ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ರೈತರು ತೀವ್ರವಾಗಿ ಕಿಡಿಕಾರಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು: ಸರ್ಕಾರದ ವಿರುದ್ಧ ಭುಗಿಲೆದ್ದ ಪ್ರತಿಭಟನೆ, ಹಿಡಿಶಾಪ ಹಾಕಿದ ರೈತರು
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಹಾಗೂ ರೈತರು ಕೆಆರ್‌ಎಸ್ ಜಲಾಶಯದ ಬಳಿ ಗುರುವಾರ ಪ್ರತಿಭಟನೆ ನಡೆಸಿದರು.
Published On :

ಮೈಸೂರು: ನೆರೆ ರಾಜ್ಯ ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ರೈತರು ತೀವ್ರವಾಗಿ ಕಿಡಿಕಾರಿದ್ದಾರೆ.

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ನೇತೃತ್ವದಲ್ಲಿ ರೈತರು ಕೆಆರ್‌ಎಸ್‌ ಜಲಾಶಯದ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ಅಣೆಕಟ್ಟಿನ ಮುಂಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ ರೈತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಕೂಡಲೇ ನೀರು ಬಿಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪುಟ್ಟಣ್ಣಯ್ಯ ಅವರು, ನಾಲೆಗಳಿಗೆ ನೀರು ಬಿಡುವಂತೆ ಈ ಭಾಗದ ರೈತರು ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಲೇ ಇದ್ದಾರೆ. ಮೊದಲು ಇಲ್ಲಿನ ರೈತರಿಗೆ ನೀರು ಬಿಡದೆ, ನೆರೆಯ ರಾಜ್ಯಕ್ಕೆ ನೀರನ್ನು ಹೇಗೆ ಬಿಡುಗಡೆ ಮಾಡುತ್ತಿದ್ದಾರೆ? ಮೊದಲು ನಮ್ಮ ರಾಜ್ಯದಲ್ಲಿ ಬೆಳೆದ ಬೆಳೆಗೆ ನೀರು ಬಿಡಬೇಕು ಎಂದು ಹೇಳಿದರು.

ಮಳೆಯ ಕೊರತೆ ಮತ್ತು ಅಣೆಕಟ್ಟಿನ ಒಳಹರಿವು ಕಡಿಮೆ ಇದ್ದು, ಇಂತಹ ನಿರ್ಣಾಯಕ ಸಮಯದಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಸೂಚಿಸಿರುವ ಸಂಕಷ್ಟ ಸೂತ್ರವನ್ನು ಪರಿಗಣಿಸಬೇಕಾಗಿದೆ, ಆದರೆ, ಅಧಿಕಾರಿಗಳು ಯಾವ ಸೂತ್ರ ಅಥವಾ ಅಂದಾಜಿನಲ್ಲಿ ನೀರು ಬಿಡುತ್ತಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ. ಕೂಡಲೇ ಬೆಂಗಳೂರಿಗೆ ತೆರಳಿ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ ಎಂದು ತಿಳಿಸಿದರು.

ಇದೇ ವೇಳೆ ಶ್ರೀರಂಗಪಟ್ಟಣದಲ್ಲೂ ರೈತ ಮುಖಂಡರು ಕೃಷ್ಣೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ನದಿಗಿಳಿದು ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.