ಪಂಚ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಪರದಾಟ: ದೇವಾಲಯಗಳ ಜೀರ್ಣೋದ್ದಾರ ಅನುದಾನಗಳಿಗೆ ತಡೆ; ಹಿಂದೂ ಸಂಘಟನೆಗಳ ಆಕ್ರೋಶ
ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಭಾರೀ ಕಸರತ್ತು ನಡೆಸುತ್ತಿರುವ ಸರ್ಕಾರ ಇದೀಗ ರಾಜ್ಯದ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಘೋಷಿಸಲಾದ ಅನುದಾನವನ್ನು ತಡೆಹಿಡಿಯಲಾಗಿದೆ. ಇದು ಹಿಂದು ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಗಳೂರು: ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಭಾರೀ ಕಸರತ್ತು ನಡೆಸುತ್ತಿರುವ ಸರ್ಕಾರ ಇದೀಗ ರಾಜ್ಯದ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಘೋಷಿಸಲಾದ ಅನುದಾನವನ್ನು ತಡೆಹಿಡಿಯಲಾಗಿದೆ. ಇದು ಹಿಂದು ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.
2022-23ನೇ ಸಾಲಿನಲ್ಲಿ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಬಿಡುಗಡೆಯಾದ ಅನುದಾನವನ್ನು ತಡೆ ಹಿಡಿಯುವಂತೆ ಧಾರ್ಮಿಕ ದತ್ತಿ ಇಲಾಖೆ ಆದೇಶ ಹೊರಡಿಸಿದೆ. ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಈ ಬಗ್ಗೆ ಸೂಚನೆಯನ್ನು ನೀಡಲಾಗಿದೆ.
ದೇವಸ್ಥಾನ ಜೀರ್ಣೋದ್ದಾರ ಕಾಮಗಾರಿ ಇನ್ನೂ ಪ್ರಾರಂಭ ಆಗದಿದ್ದರೆ ಹಣ ಬಿಡುಗಡೆ ಮಾಡದಂತೆ ಧಾರ್ಮಿಕ ದತ್ತಿ ಇಲಾಖೆ ಆದೇಶದಲ್ಲಿ ಸೂಚಿಸಿದೆ. ಇನ್ನು ಶೇ.50 ರಷ್ಟು ಹಣ ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದರೆ ಅದನ್ನು ತಕ್ಷಣ ತಡೆ ಹಿಡಿದು ಅನುದಾನ ಬಿಡುಗಡೆ ಮಾಡದಂತೆ ಸೂಚನೆ ನೀಡಲಾಗಿದೆ.
ಅನುದಾನದ ಆಡಳಿತಾತ್ಮಕ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಕೆ ಆಗಿದ್ದರೆ ಆಡಳಿತಾತ್ಮಕ ಮಂಜೂರಾತಿಯನ್ನು ತಡೆಹಿಡಿಯುವುದು. ಹೀಗೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಮೂರು ನಿರ್ದೇಶನಗಳನ್ನು ಎಲ್ಲಾ ಜಿಲ್ಲಾಧಿಕಾರಿಗಳಿಗೆ ನೀಡಿದ್ದಾರೆ.
ದೇವಸ್ಥಾನಗಳ ಅನುದಾನ ಬಿಡುಗಡೆಗೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದು ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಬಿಜೆಪಿ ಸರ್ಕಾರ ದೇವಸ್ಥಾನಗಳ ಸಾಂಸ್ಕೃತಿಕ ಮತ್ತು ಧಾರ್ಮಿಕ ಹಿನ್ನೆಲೆ, ಸಂಸ್ಕೃತಿಯನ್ನು ರೂಪಿಸುವಲ್ಲಿ ಅವುಗಳ ಪಾತ್ರವನ್ನು ಗಮನದಲ್ಲಿಟ್ಟುಕೊಂಡು ಜೀರ್ಣೋದ್ಧಾರಕ್ಕೆ ಅನುದಾನ ಬಿಡುಗಡೆ ಮಾಡಿತ್ತು. ಆದರೆ, ಇದನ್ನು ಕಾಂಗ್ರೆಸ್ ಸರ್ಕಾರ ತಡೆ ಹಿಡಿದಿದ್ದು ಆಕ್ಷೇಪಾರ್ಹ ಎಂದು ಅಭಿಪ್ರಾಯ ವ್ಯಕ್ತಪಡಿಸಲಾಗಿದೆ. ಜತೆಗೆ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


