ಇಂದಿರಾ ಕ್ಯಾಂಟೀನ್ ಊಟದ ದರ ಹೆಚ್ಚಿಸಲು ಸಚಿವ ಸಂಪುಟ ಒಪ್ಪಿಗೆ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್ನಲ್ಲಿ ಬಡವರಿಗೆ ನೀಡುತ್ತಿದ್ದ ಊಟದ ದರ ಹೆಚ್ಚಿಸಲು ಸಚಿವ ಸಂಪುಟ ಸಭೆ ಶನಿವಾರ ಒಪ್ಪಿಗೆ ನೀಡಿದೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್ನಲ್ಲಿ ಬಡವರಿಗೆ ನೀಡುತ್ತಿದ್ದ ಊಟದ ದರ ಹೆಚ್ಚಿಸಲು ಸಚಿವ ಸಂಪುಟ ಸಭೆ ಶನಿವಾರ ಒಪ್ಪಿಗೆ ನೀಡಿದೆ.
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಇಂದಿರಾ ಕ್ಯಾಂಟಿನ್ ಊಟದ ದರ ಹೆಚ್ಚಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆದರೆ, ಬಿಬಿಎಂಪಿ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್ಗಳಲ್ಲಿ ಹಳೇ ದರ ಮುಂದುವರಿಕೆಯಾಗಲಿದೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಎಚ್. ಕೆ. ಪಾಟೀಲ್ ಅವರು, ರಾಜ್ಯದ ಇತರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಇಂದಿರಾ ಕ್ಯಾಂಟಿನ್ ಊಟದ ದರ 27 ರೂ. ನಿಗದಿ ಮಾಡಲಾಗಿದೆ ಎಂದರು.
ಇಂದಿರಾ ಕ್ಯಾಂಟೀನ್ಗಳಲ್ಲಿ ಒಂದು ಊಟದ ಬೆಲೆ 60 ರೂ. ದರ ನಿಗದಿ ಮಾಡಲಾಗಿದೆ. ಆದರೆ ಗ್ರಾಹಕರಿಂದ ಕೇವಲ 27 ರೂ. ಸಂಗ್ರಹಿಸಲಿದ್ದು, ಉಳಿದ 33 ರೂ. ಸಬ್ಸಿಡಿಯನ್ನು ಸರ್ಕಾರ ನೀಡಲಿದೆ. ರಾಜ್ಯಾದ್ಯಂತ ನೂತನವಾಗಿ ನಿರ್ಮಾಣವಾಗಲಿರುವ ಇಂದಿರಾ ಕ್ಯಾಂಟೀನ್ಗಳಲ್ಲಿ ಈ ಹೊಸ ದರ ಜಾರಿಗೆ ಬರಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಬಿಬಿಎಂಪಿ ಹೊರತುಪಡಿಸಿ ಸ್ಥಳೀಯ ಸಂಸ್ಥೆಗಳಲ್ಲಿ ಹೊಸದಾಗಿ 188 ಇಂದಿರಾ ಕ್ಯಾಂಟೀನ್ ತೆರೆಯಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಹೊಸ ಇಂದಿರಾ ಕ್ಯಾಂಟೀನ್ಗೆ 27 ಕೋಟಿ ರೂ. ನೀಡಲು ಅನುಮೋದಿಸಲಾಗಿದೆ. ಸ್ಥಳೀಯ ತಿಂಡಿ ತಿನಿಸು ಗಮನದಲ್ಲಿಟ್ಟುಕೊಂಡು ಇಂದಿರಾ ಕ್ಯಾಂಟೀನ್ ಮೆನು ಇರಲಿದೆ ಎಂದು ಎಚ್.ಕೆ.ಪಾಟೀಲ್ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


