ಚಾಮರಾಜನಗರ: ಆನೆ ದಾಳಿಗೆ ಓರ್ವ ಬಲಿ, ಮತ್ತೋರ್ವನಿಗೆ ಗಾಯ
ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮತ್ತೊಂದು ಆನೆ ದಾಳಿ ಪ್ರಕರಣ ವರದಿಯಾಗಿದ್ದು, ದಾಳಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದರೆ ಮತ್ತೋರ್ವ ವ್ಯಕ್ತಿ ಗಾಯಗೊಂಡಿದ್ದಾರೆ.

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮತ್ತೊಂದು ಆನೆ ದಾಳಿ ಪ್ರಕರಣ ವರದಿಯಾಗಿದ್ದು, ದಾಳಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದರೆ ಮತ್ತೋರ್ವ ವ್ಯಕ್ತಿ ಗಾಯಗೊಂಡಿದ್ದಾರೆ.
ದೇವಾಲಯಕ್ಕೆ ತೆರಳುತ್ತಿದ್ದಾಗ ಕಾಡಾನೆ ದಾಳಿಯಿಂದ ಓರ್ವ ಮೃತಪಟ್ಟಿದ್ದು, ಮತ್ತೋರ್ವ ಅಪಾಯದಿಂದ ಪಾರಾಗಿರುವ ಘಟನೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ಸಮೀಪದ ಇಂಡಿಗನತ್ತ ಅರಣ್ಯದಲ್ಲಿ ನಡೆದಿದೆ.
ಇದನ್ನೂ ಓದಿ: ಹಾಸನ: ಆನೆ ದಾಳಿಗೆ ಮಹಿಳೆ ಬಲಿ
ಪೊಲೀಸ್ ಮೂಲಗಳ ಪ್ರಕಾರ ಬೆಂಗಳೂರು ಮೂಲದ ಗೋವಿಂದರಾಜು ಮೃತಪಟ್ಟಿರುವ ದುರ್ದೈವಿಯಾಗಿದ್ದು, ಈತನ ಗೆಳೆಯ ಲೋಕೇಶ್ ಅಪಾಯದಿಂದ ಪಾರಾಗಿದ್ದಾರೆ. ಶನಿವಾರ (ಆಗಸ್ಟ್ 19) ಮಹದೇಶ್ವರ ಬೆಟ್ಟಕ್ಕೆ ಬಂದು ಮಹದೇಶ್ವರ ಸನ್ನಿಧಿಯಲ್ಲಿ ಪೂಜೆ ಮುಗಿಸಿ ನಾಗಮಲೆಗೆ ರಾತ್ರಿ ವೇಳೆ ತೆರಳುತ್ತಿದ್ದ ವೇಳೆ ಈ ಘಟನೆ ನಡಿದಿದೆ ಎಂದು ತಿಳಿದುಬಂದಿದೆ.
ಇಂಡಿಗನತ್ತ ಹತ್ತಿರವಿರುವ ಅರಣ್ಯ ಇಲಾಖೆ ಚೆಕ್ ಪೋಸ್ಟ್ ಬಳಿ ಆನೆ ದಾಳಿ ಮಾಡಿದ್ದು, ಈ ವೇಳೆ ಗೋವಿಂದರಾಜು ಆನೆ ತುಳಿಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಲೋಕೇಶ್ ಅಲ್ಲಿಂದ ಪರಾರಿಯಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ವೇಳೆ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ಇನ್ನು ಸ್ಥಳಕ್ಕೆ ಮಲೆಮಹದೇಶ್ವರ ಬೆಟ್ಟ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ರಾತ್ರಿ ವೇಳೆ ನಾಗಮಲೆಗೆ ತೆರಳಿದ್ದು ಈ ಅವಘಡಕ್ಕೆ ಕಾರಣ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


