ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ಸ್ಥಳ, ದಿನಾಂಕ ಮುಂದೂಡಿಕೆ; ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಾಹುಲ್ ಗಾಂಧಿಯಿಂದ ಚಾಲನೆಗೆ ಸಿದ್ಧತೆ
ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮದ ಸ್ಥಳ ಮತ್ತು ದಿನಾಂಕವನ್ನು ಬದಲಾಯಿಸಲಾಗಿದೆ.

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮದ ಸ್ಥಳ ಮತ್ತು ದಿನಾಂಕವನ್ನು ಬದಲಾಯಿಸಲಾಗಿದೆ.
ಆ.27ರ ಬದಲು ಆ.30ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ ನಡೆಯಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ.
ಈ ಹಿಂದೆ ಬೆಳಗಾವಿಯಲ್ಲಿ ಆ.27ರಂದು ಆಯೋಜಿಸಲಾಗಿದ್ದ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮವನ್ನು ಆ.30ರಂದು ಮೈಸೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ನಾನು ಅದೃಷ್ಟಶಾಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆಯಾಗಿ, ನನ್ನ ಇಲಾಖೆಯಿಂದ ಮಹಿಳೆಯರಿಗಾಗಿ ಯೋಜನೆ ರೂಪಿಸಿ, ತಾಯಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದ ಬಳಿಕ ಭಾನುವಾರ ಮೈಸೂರು, ಮಂಡ್ಯ ಮತ್ತು ಹಾಸನ ಜಿಲ್ಲೆಗಳ ಸಚಿವರು ಮತ್ತು ಶಾಸಕರೊಂದಿಗೆ ಸಭೆ ನಡೆಸಲಾಗುವುದು ಎಂದು ಇದೇ ವೇಳೆ ಮಾಹಿತಿ ನೀಡಿದರು.
ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಹಲವು ಪ್ರಮುಖ ನಾಯಕರು ಕಾರ್ಯಕ್ರಮದ ಸಿದ್ಧತೆಗಳ ಪರಿಶೀಲನೆ ನಡೆಸಲು ಬೆಳಗಾವಿಗೆ ಭೇಟಿ ನೀಡಿದ್ದರು.
ಈ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಅವರ ಉಪಸ್ಥಿತಿಯನ್ನು ಪರಿಗಣಿಸಿ ಸ್ಥಳವನ್ನು ಮೈಸೂರಿಗೆ ಸ್ಥಳಾಂತರಿಸಲಾಗಿದೆ. ಆದರೆ, ಯೋಜನೆಯನ್ನು ವಿವಿಧ ವಿಭಾಗಗಳಲ್ಲಿ ಚಾಲನೆ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೆಬ್ಬಾಳ್ಕರ್ ಅವರ ಆಪ್ತ ಮೂಲಗಳು ಮಾಹಿತಿ ನೀಡಿವೆ.
ಮೈಸೂರಿನಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದರೆ, ಅನ್ನ ಭಾಗ್ಯ ಯೋಜನೆಯನ್ನು ಶೀಘ್ರದಲ್ಲೇ ಬೆಳಗಾವಿಯಲ್ಲಿ ಉದ್ಘಾಟಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


