ವಿಜಯನಗರ: ಚಿರತೆ ದಾಳಿಯಿಂದ ಬೈಕ್ ಸವಾರನಿಗೆ ಗಂಭೀರ ಗಾಯ; ಸ್ಥಳೀಯರಲ್ಲಿ ಆತಂಕ
ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕಿನಲ್ಲಿ ಸೋಮವಾರ ಬೈಕ್ ಸವಾರೊಬ್ಬರ ಮೇಲೆ ಚಿರತೆ ದಾಳಿ ಮಾಡಿದ್ದು, ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ವಿಜಯನಗರ: ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕಿನಲ್ಲಿ ಸೋಮವಾರ ಬೈಕ್ ಸವಾರೊಬ್ಬರ ಮೇಲೆ ಚಿರತೆ ದಾಳಿ ಮಾಡಿದ್ದು, ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪ್ರವೀಣ್ ಎಂದು ಗುರುತಿಸಲಾದ ಯುವಕ ಮಾಗಳ-ಹಿರೇಹಡಗಲಿ ಗ್ರಾಮಗಳ ನಡುವೆ ಸಂಚರಿಸುತ್ತಿದ್ದಾಗ ಈ ಘಟನೆ ನಡೆದಿದೆ.
ಪ್ರವೀಣ್‌ನ ಗಲಾಟೆ, ಕಿರುಚಾಟ ಕೇಳಿದ ರೈತರು ಹಾಗೂ ದಾರಿಹೋಕರು ಆತನ ಸಹಾಯಕ್ಕೆ ಧಾವಿಸಿದ್ದು, ಚಿರತೆ ಸ್ಥಳದಿಂದ ಪರಾರಿಯಾಗಿದೆ. ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಲ್ಲಿನ ಬಹುತೇಕ ಗ್ರಾಮಸ್ಥರು ಈ ಭಾಗದಲ್ಲಿ ತಮ್ಮ ಕುಟುಂಬ ಸದಸ್ಯರೊಂದಿಗೆ ಬೈಕ್, ಸ್ಕೂಟರ್‌ಗಳಲ್ಲಿ ಸಂಚರಿಸುತ್ತಿದ್ದು, ವಿವಿಧ ಹಳ್ಳಿಗಳಿಂದ ಹೆಚ್ಚಿನ ಸಂಖ್ಯೆಯ ಜನರು ಕಾರ್ಖಾನೆಗಳಿಗೆ ನಡೆದುಕೊಂಡು ಇದೇ ಮಾರ್ಗದಲ್ಲಿ ಹೋಗುತ್ತಾರೆ. ಹೀಗಾಗಿ, ಈ ಘಟನೆ ಜನರಲ್ಲಿ ಆತಂಕ ಮೂಡಿಸಿದೆ.
ಅರಣ್ಯ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ದನ, ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆ ಇದೀಗ ಮನುಷ್ಯರ ಮೇಲೆ ದಾಳಿ ನಡೆಸುತ್ತಿದ್ದು, ಅನಾಹುತ ಸಂಭವಿಸುವ ಮುನ್ನ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಈ ಭಾಗದ ಜನರು ಆಗ್ರಹಿಸಿದ್ದಾರೆ.
ಇದೇ ಜಿಲ್ಲೆಯ ಹೊಸಪೇಟೆ ತಾಲೂಕಿನ ಗ್ರಾಮಗಳಲ್ಲೂ ಚಿರತೆ ಕಾಣಿಸಿಕೊಂಡಿದೆ. ಇತ್ತೀಚೆಗೆ ಅಧಿಕಾರಿಗಳು ನಡೆಸಿದ ಸಮೀಕ್ಷೆಯಲ್ಲಿ ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಚಿರತೆಗಳ ಹಾವಳಿ ಹೆಚ್ಚಿರುವುದು ಕಂಡುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


