ಅಪ್ರಾಪ್ತ ಬಾಲಕಿಯೊಂದಿಗೆ ವಿವಾಹ: ಎಫ್ಐಆರ್ ದಾಖಲಾದ 15 ದಿನಗಳ ಬಳಿಕ ಶಿಕ್ಷಕ ಅಮಾನತು
ಅಪ್ರಾಪ್ತ ವಯಸ್ಸಿನ ವಿದ್ಯಾರ್ಥನಿಯನ್ನು ವಿವಾಹವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕನನನ್ನು ಅಮಾನತುಗೊಳಿಸಿ ಡಿಡಿಪಿಐ ಸಲೀಂ ಪಾಶಾ ಸೋಮವಾರ ಆದೇಶಿಸಿದ್ದಾರೆ.

ಭಾಲ್ಕಿ (ಬೀದರ್): ಅಪ್ರಾಪ್ತ ವಯಸ್ಸಿನ ವಿದ್ಯಾರ್ಥನಿಯನ್ನು ವಿವಾಹವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕನನನ್ನು ಅಮಾನತುಗೊಳಿಸಿ ಡಿಡಿಪಿಐ ಸಲೀಂ ಪಾಶಾ ಸೋಮವಾರ ಆದೇಶಿಸಿದ್ದಾರೆ.
ಹಲಸಿ ತೂಗಾಂವ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಸಂದೀಪಕುಮಾರ ಅಮಾನತುಗೊಂಡವರು. ಶಿಕ್ಷಕನ ಕರ್ತವ್ಯಲೋಪ, ದುರ್ನಡತೆಯಿಂದ ಶಿಕ್ಷಣ ಇಲಾಖೆ ಮುಜುಗರಕ್ಕೆ ಒಳಗಾಗಿದೆ. ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಹಾಗೂ ಮೇಲ್ಮನವಿ) ನಿಯಮಾವಳಿ 1957ರ ನಿಯಮಗಳನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ಅದೇ ಗ್ರಾಮದ ಪ್ರೌಢಶಾಲೆಯ ವಿದ್ಯಾರ್ಥಿನಿಯನ್ನು ಮದುವೆಯಾಗಿದ್ದ. ಈ ಸಂಬಂಧ ಸಂದೀಪ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಎಫ್ಐಆರ್ ದಾಖಲಾದ 15 ದಿನಗಳ ಬಳಿಕ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


