ಕೊಡಗು; ಸಿದ್ದಾಪುರ ಬಳಿ ಕಾಡಾನೆ ದಾಳಿಗೆ ಮಹಿಳೆ ಬಲಿ
ಕಾಡಾನೆ ದಾಳಿಗೆ 65 ವರ್ಷದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಬಡಗ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಮಡಿಕೇರಿ: ಕಾಡಾನೆ ದಾಳಿಗೆ 65 ವರ್ಷದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಬಡಗ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಆಯಿಶಾ(63) ಮೃತ ಮೃತ ದುರ್ಧೈವಿ. ಮನೆ ಸಮೀಪ ವಾಕಿಂಗ್ ಮಾಡುತ್ತಿದ್ದ ಸಂದರ್ಭ ಆನೆ ದಾಳಿ ನಡೆಸಿದೆ. ಈ ವೇಳೆ ಆಯಿಶಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದು ಕಳೆದ ಒಂದು ವಾರದ ಅವಧಿಯಲ್ಲಿ ನಡೆದ ಎರಡನೇ ಘಟನೆಯಾಗಿದೆ. ಕೆಲವೇ ದಿನಗಳ ಹಿಂದೆ ದಕ್ಷಿಣ ಕೊಡಗಿನ ಅರೆಕಾಡು ಪ್ರದೇಶದಲ್ಲಿ ಕಟ್ಟೆಮಾಡು ದೇವಪ್ಪ (58) ಎಂಬವರು ಆನೆ ದಾಳಿಯಿಂದ ಮೃತಪಟ್ಟಿದ್ದರು.
ವಾರದ ಅಂತರದಲ್ಲಿ ಇಬ್ಬರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿದರು. ಮಾನವ-ಪ್ರಾಣಿ ಸಂಘರ್ಷ ನಿವಾರಿಸುವಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆಂದು ಆರೋಪಿಸಿದರು. ಅಲ್ಲದೆ, ಪುಂಡಾನೆಯನ್ನು ಸೆರೆಹಿಡಿಯುವಂತೆ ಆಗ್ರಹಿಸಿದರು. ಇದೇ ವೇಳೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಸ್ಥಳಕ್ಕೆ ಆಗಮಿಸುವಂತೆ ಒತ್ತಾಯಿಸಿದರು.
ಇದನ್ನೂ ಓದಿ: ಚಾಮರಾಜನಗರ: ಆನೆ ದಾಳಿಗೆ ಓರ್ವ ಬಲಿ, ಮತ್ತೋರ್ವನಿಗೆ ಗಾಯ
ಬಳಿಕ ಸ್ಥಳಕ್ಕೆ ಮಡಿಕೇರಿ ಡಿಸಿಎಫ್ ಎ.ಟಿ.ಪೂವಯ್ಯ, ವಿರಾಜಪೇಟೆ ಡಿಸಿಎಫ್ ಶರಣಪ್ಪ ಮತ್ತಿತರರು ಭೇಟಿ ನೀಡಿದ್ದರು. ಈ ವೇಳೆ ಆನೆಯನ್ನು ಸೆರೆ ಹಿಡಿಯುವ ಭರವಸೆ ನೀಡಿದರು.
ಮಳೆಯ ನಂತರ ಕಂದಕಗಳು ಮತ್ತು ಸೋಲಾರ್ ಬೇಲಿಗೆಳು ನಿಷ್ಕ್ರಿಯಗೊಂಡಿವೆ. ಹಲವು ಪ್ರದೇಶಗಳಲ್ಲಿ ಗೇಟ್ ಗಳನ್ನು ಹಾಕಲಾಗಿದೆ. ರಾತ್ರಿಯ ಸಮಯದಲ್ಲಿ ಗೇಟ್ ಗಳನ್ನು ಹಾಕಲಾಗಿರುತ್ತದೆ. ಆದರೆ, ತಮ್ಮ ಪ್ರಯಾಣದ ಸಂದರ್ಭದಲ್ಲಿ ಗ್ರಾಮಸ್ಥರು ತೆರೆದಿಡುತ್ತಾರೆ. ಇದರಿಂದ ಘಟನೆ ಸಂಭವಿಸುತ್ತಿದೆ. ಆದರೂ ಆನೆಗಳ ಓಡಾಟ ನಿಯಂತ್ರಿಸಲು ಯೋಜನೆಗಳನ್ನು ಸಿದ್ಧಪಡಿಸಲಾಗಿದ್ದು, ಕಾಡಾನೆಗಳ ಪ್ರವೇಶ ತಡೆಯಲು ಕಾಂಕ್ರೀಟ್ ಗೋಡೆ ನಿರ್ಮಾಣ ಪ್ರಸ್ತಾವನೆಯನ್ನು ಸರ್ಕಾರದ ಮುಂದಿಡಲಾಗಿದೆ ಎಂದು ಡಿಸಿಎಫ್ ಶರಣಪ್ಪ ಅವರು ಹೇಳಿದರು.
ಪುಂಡಾನೆಗಳ ಗುರುತಿಸುವ ಪ್ರಕ್ರಿಯೆಗಳು ನಡೆಯುತ್ತಿವೆ. ಎರಡು ಆನೆಗಳ ಸೆರೆ ಹಿಡಿಯಲು ಅನುಮತಿ ಸಿಕ್ಕಿದೆ. ಕಳೆದ ವಾರ ಒಂದು ಆನೆಯನ್ನು ಸೆರೆ ಹಿಡಿಯಲಾಗಿದೆ. ಮತ್ತೊಂದು ಆನೆ ಪತ್ತೆ ಮಾಡಿ, ಶೀಘ್ರದಲ್ಲೇ ಸೆರೆ ಹಿಡಿಯಲಾಗುವುದು ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


