ರಾಜ್ಯ

ಕೊಪ್ಪಳ: ಮಾಜಿ ಸಚಿವ, ರಾಜ ವಂಶಸ್ಥ ಶ್ರೀರಂಗದೇವರಾಯಲು ನಿಧನ

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಚಿವ ಹಾಗೂ ರಾಜ ವಂಶಸ್ಥ ಶ್ರೀರಂಗದೇವರಾಯಲು(87) ಅವರು ಮಂಗಳವಾರ ನಿಧನವಾಗಿದ್ದಾರೆ.

ಕೊಪ್ಪಳ: ಮಾಜಿ ಸಚಿವ, ರಾಜ ವಂಶಸ್ಥ ಶ್ರೀರಂಗದೇವರಾಯಲು ನಿಧನ
ಶ್ರೀರಂಗದೇವರಾಯಲು
Published On :

ಕೊಪ್ಪಳ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಚಿವ ಹಾಗೂ ರಾಜ ವಂಶಸ್ಥ ಶ್ರೀರಂಗದೇವರಾಯಲು(87) ಅವರು ಮಂಗಳವಾರ ನಿಧನವಾಗಿದ್ದಾರೆ.

ಶ್ರೀರಂಗದೇವರಾಯಲು ಅವರು ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಶ್ರೀರಂಗದೇವರಾಯಲು ಅವರು ಪತ್ನಿ ಲಲಿತಾರಾಣಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ವಿಜಯಸಾಮ್ರಾಜ್ಯದ ವಂಶಸ್ಥರಾಗಿದ್ದ ಶ್ರೀರಂಗದೇವರಾಯಲು ಅವರು 1974ರಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಮೂಲಕ ಸಕ್ರಿಯ ರಾಜಕಾರಣ ಪ್ರವೇಶಿಸಿದ್ದರು. ಗಂಗಾವತಿ ಮತ್ತು ಕನಕಗಿರಿ ಕ್ಷೇತ್ರದಿಂದ ಐದು ಬಾರೀ ಶಾಸಕರಾಗಿದ್ದರು. 

ಎಂ. ವೀರಪ್ಪ ಮೊಯ್ಲಿ ಅವರು ಮುಖ್ಯಮಂತ್ರಿಯಾಗಿದ್ದಾಗ ಅವರ ಸಂಪುಟದಲ್ಲಿ ಸಚಿವರಾಗಿದ್ದ ಶ್ರೀರಂಗದೇವರಾಯಲು ಅವರ ನಿಧನಕ್ಕೆ ಗಣ್ಯರ ಕಂಬನಿ ಮಿಡಿದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.