ಕಾವೇರಿ ವಿವಾದ: ಕೇಂದ್ರದ ಬಳಿ ಸರ್ವಪಕ್ಷ ನಿಯೋಗ ಕರೆದೊಯ್ಯಲು ನಿರ್ಧಾರ- ಸಿಎಂ ಸಿದ್ದರಾಮಯ್ಯ
ಯಾವುದೇ ಕಾರಣಕ್ಕೂ ರಾಜ್ಯದ ರೈತರ ಹಿತ ಬಲಿ ಕೊಡುವುದಿಲ್ಲ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾವೇರಿ, ಮೇಕೆದಾಟು, ಅಪ್ಪರ್ ಕೃಷ್ಣ ಮತ್ತು ಮಹದಾಯಿ ವಿವಾದ ಸಂಬಂಧ ಕೇಂದ್ರದ ಬಳಿಗೆ ಸರ್ವ ಪಕ್ಷಗಳ ನಿಯೋಗ...

ಬೆಂಗಳೂರು: ಯಾವುದೇ ಕಾರಣಕ್ಕೂ ರಾಜ್ಯದ ರೈತರ ಹಿತ ಬಲಿ ಕೊಡುವುದಿಲ್ಲ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾವೇರಿ, ಮೇಕೆದಾಟು, ಅಪ್ಪರ್ ಕೃಷ್ಣ ಮತ್ತು ಮಹದಾಯಿ ವಿವಾದ ಸಂಬಂಧ ಕೇಂದ್ರದ ಬಳಿಗೆ ಸರ್ವ ಪಕ್ಷಗಳ ನಿಯೋಗ ಕರೆದೊಯ್ಯಲು ನಿರ್ಧಾರ ಮಾಡಲಾಗಿದೆ ಎಂದು ಬುಧವಾರ ಹೇಳಿದ್ದಾರೆ.
ಇಂದು ಸರ್ವಪಕ್ಷ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿಯಾಗಿ ಕರ್ನಾಟಕದ ನೀರಿನ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿಕೊತ್ತೇವೆ. ಇದಕ್ಕೆ ಸರ್ವ ಪಕ್ಷಗಳು ಸಹ ಸಮ್ಮತಿ ಸೂಚಿಸಿವೆ ಎಂದು ಸಿಎಂ ತಿಳಿಸಿದ್ದಾರೆ.
ಸರ್ವಪಕ್ಷ ನಿಯೋಗ, ಕೇಂದ್ರ ಪರಿಸರ ಸಚಿವರನ್ನು ಸಹ ಭೇಟಿ ಮಾಡಲಿದ್ದು, ಮೇಕೆದಾಟು ಯೋಜನೆಗೆ ಅರಣ್ಯ ಪ್ರದೇಶದ ಕ್ಲಿಯರೆನ್ಸ್ ನೀಡಬೇಕೆಂದು ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.
ಜಲ ವಿವಾದ, ಭಾಷೆ ಗಡಿ ಬಗ್ಗೆ ರಾಜ್ಯದ ನಿಲುವು ತೆಗೆದುಕೊಳ್ಳುವಾಗ ಯಾವುದೇ ರಾಜಕೀಯ ಮಾಡಿಲ್ಲ. ಸರ್ಕಾರ ರಾಜ್ಯದ ಹಿತದೃಷ್ಟಿಯಿಂದ ತೆಗೆದುಕೊಳ್ಳುವ ನಿಲುವುಗಳಿಗೆ ಬೆಂಬಲವಿದೆ ಎಂದು ಸರ್ವ ಪಕ್ಷದ ನಾಯಕರು ಹೇಳಿದ್ದಾರೆ ಎಂದು ಸಿಎಂ ತಿಳಿಸಿದರು.
ರೈತರ ರಕ್ಷಣೆ ನಮ್ಮ ಜವಾಬ್ದಾರಿಯಾಗಿದ್ದು, ಯಾವುದೇ ಕಾರಣಕ್ಕೂ ರೈತರ ಹಿತ ಬಲಿ ಕೊಡಲ್ಲ. ಕಾವೇರಿ ವಿವಾದದ ಬಗ್ಗೆ ಸುಪ್ರೀಂಕೋರ್ಟ್ನಲ್ಲಿ ಕರ್ನಾಟಕದ ಪರವಾಗಿ ಸಮರ್ಥವಾಗಿ ವಾದ ಮಂಡಿಸಲು ಸಲಹೆ ನೀಡಿದ್ದೇವೆ. ತಮಿಳುನಾಡು ಅರ್ಜಿ ವಜಾ ಆಗುವಂತೆ ವಾದಮಾಡಿ ಎಂದಿದ್ದೇವೆ. ಬೆಳೆಗಳ ರಕ್ಷಣೆ ಮಾಡಬೇಕು, ಕುಡಿಯುವ ನೀರನ್ನೂ ಕೊಡಬೇಕು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


