ಕನ್ನಡ ಪಠ್ಯ ಪುಸ್ತಕದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನ: ಪಾಠ ಕೈಬಿಡಲು ಆಗ್ರಹಿಸಿ ವಿಪ್ರ ಒಕ್ಕೂಟದಿಂದ ಪ್ರತಿಭಟನೆ
8ನೇ ತರಗತಿ ಪಠ್ಯ ಪುಸ್ತಕದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡಲಾಗಿದ್ದು, ತಕ್ಷಣವೇ ಆ ಪಾಠವನ್ನು ತೆಗೆದುಹಾಕಬೇಕೆಂದು ಆಗ್ರಹಿಸಿ ಕಲಬುರಗಿಯಲ್ಲಿ ಇಂದು ವಿಪ್ರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ನಡೆಸಿತು.

ಬೆಂಗಳೂರು: 8ನೇ ತರಗತಿ ಪಠ್ಯ ಪುಸ್ತಕದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡಲಾಗಿದ್ದು, ತಕ್ಷಣವೇ ಆ ಪಾಠವನ್ನು ತೆಗೆದುಹಾಕಬೇಕೆಂದು ಆಗ್ರಹಿಸಿ ಕಲಬುರಗಿಯಲ್ಲಿ ಇಂದು ವಿಪ್ರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ನಡೆಸಿತು.
ಮಿನಿ ವಿಧಾನಸೌಧದ ಎದುರು ಸಮುದಾಯದ ಒಕ್ಕೂಟ ಪ್ರತಿಭಟನೆ ನಡೆಸಿದೆ. ಸರ್ದಾರ್ ವಲ್ಲಭ ಭಾಯ್ ಪಟೇಲ್ ವೃತ್ತದಿಂದ ಮಿನಿ ವಿಧಾನಸೌಧಕ್ಕೆ ಮೆರವಣಿಗೆಯಲ್ಲಿ ಆಗಮಿಸಿದ ಒಕ್ಕೂಟದ ಸದಸ್ಯರು ಜಿಲ್ಲಾಧಿಕಾರಿಗಳ ಕಚೇರಿ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಬಲವಂತದ ಮತಾಂತರ, ಗೋಹತ್ಯೆ ತಡೆಗೆ ಸರ್ಕಾರ ಚಿಂತನೆ ಮಾಡಲಿ: ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ್ ಹಾರನಹಳ್ಳಿ
" 8 ನೇ ತರಗತಿಯ ಕನ್ನಡ ಪಠ್ಯ ಪುಸ್ತಕದಲ್ಲಿ ವಿಜಯಮಾಲ ರಂಗನಾಥ್ ಅವರು ಬರೆದಿರುವ ರಕ್ತದ ಗುಂಪು ಎಂಬ ಪಾಠದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡಲಾಗಿದೆ. ಇದರಿಂದ ಸಮುದಾಯದ ಭಾವನೆಗಳಿಗೆ ನೋವುಂಟಾಗಿದೆ ಎಂದು ಮನವಿ ಪತ್ರದಲ್ಲಿ ಒಕ್ಕೂಟ ತಿಳಿಸಿದೆ.
ಪಠ್ಯಪುಸ್ತಕದಿಂದ ಪಾಠ ಹಿಂಪಡೆಯಬೇಕು, ಇಲ್ಲವಾದಲ್ಲಿ ಬೇಡಿಕೆ ಈಡೇರುವವರೆಗೂ ಹೋರಾಟ ದುವರಿಸುವುದಾಗಿ ಒಕ್ಕೂಟ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


