ರಾಜ್ಯ

ಚಂದ್ರಯಾನ-3ರ ಯಶಸ್ಸಿನ ಕೀರ್ತಿ ಯಾರಿಗೆ ಸಲ್ಲುತ್ತದೆ: ವಿಜ್ಞಾನಿಗಳಿಗೋ ಅಥವಾ 'ಲಾರ್ಡ್' ತಿರುಪತಿಗೋ?

ಭಾರತೀಯ ಬಾಹ್ಯಾಕಾಶ ಸಂಸ್ಥೆ ಅಥವಾ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ 3 ಯಶಸ್ವಿಯಾಗಿದ್ದು, ಭಾರತ ಹೊಸ ದಾಖಲೆ ಬರೆದಿದೆ. ಚಂದ್ರಯಾನ–3ರ ಯಶಸ್ಸಿನ ಕೀರ್ತಿ ಯಾರಿಗೆ ಸಲ್ಲುತ್ತದೆ. ನಮ್ಮ ವಿಜ್ಞಾನಿಗಳಿಗೋ ಅಥವಾ ‘ಲಾರ್ಡ್’ ತಿರುಪತಿಗೋ? ಎಂದು ನಟ ಚೇತನ್ ಅಹಿಂಸಾ ಪ್ರಶ್ನಿಸಿದ್ದಾರೆ.

ಚಂದ್ರಯಾನ-3ರ ಯಶಸ್ಸಿನ ಕೀರ್ತಿ ಯಾರಿಗೆ ಸಲ್ಲುತ್ತದೆ: ವಿಜ್ಞಾನಿಗಳಿಗೋ ಅಥವಾ 'ಲಾರ್ಡ್' ತಿರುಪತಿಗೋ?
ನಟ ಚೇತನ್ ಅಹಿಂಸಾ
Published On :

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಸ್ಥೆ ಅಥವಾ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ 3 ಯಶಸ್ವಿಯಾಗಿದ್ದು, ಭಾರತ ಹೊಸ ದಾಖಲೆ ಬರೆದಿದೆ. ಚಂದ್ರಯಾನ–3ರ ಯಶಸ್ಸಿನ ಕೀರ್ತಿ ಯಾರಿಗೆ ಸಲ್ಲುತ್ತದೆ. ನಮ್ಮ ವಿಜ್ಞಾನಿಗಳಿಗೋ ಅಥವಾ ‘ಲಾರ್ಡ್’ ತಿರುಪತಿಗೋ? ಎಂದು ನಟ ಚೇತನ್ ಅಹಿಂಸಾ ಪ್ರಶ್ನಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಟ್ವೀಟ್‌ ಮಾಡಿರುವ ಅವರು, ‘ಚಂದ್ರಯಾನ–3 ಯೋಜನೆ ಯಶಸ್ವಿಯಾಗಿದ್ದು, ವಿಕ್ರಮ್ ಲ್ಯಾಂಡಲ್ ಚಂದ್ರನ ಮೇಲೆ ಇಳಿದ ಐತಿಹಾಸಿಕ ಕ್ಷಣವನ್ನು ನೋಡಲು ನನಗೆ ಸಂತೋಷವಾಗಿದೆ ಎಂದಿದ್ದಾರೆ. 

ಮುಂದುವರಿದು, ಆದರೆ, ಚಂದ್ರಯಾನ–3ರ ಈ ಯಶಸ್ಸಿನ ಕೀರ್ತಿ ಯಾರಿಗೆ ಸಲ್ಲುತ್ತದೆ: ನಮ್ಮ ವಿಜ್ಞಾನಿಗಳಿಗೋ ಅಥವಾ ‘ಲಾರ್ಡ್‘ ತಿರುಪತಿಗೋ?’ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಮತ್ತೊಂದು ಟ್ವೀಟ್ ಮಾಡಿರುವ ಅವರು, 'ವಾಸ್ತವ' ಎಂದು ಬರೆದುಕೊಂಡಿದ್ದು, ಚಂದ್ರಯಾನ-3 ನೌಕೆಯ ಉಡಾವಣೆ ಚಿತ್ರ ಮತ್ತು ವ್ಯಕ್ತಿಯೊಬ್ಬ ಮ್ಯಾನ್‌ಹೋಲ್‌ಗೆ ಇಳಿದಿರುವ ಚಿತ್ರವನ್ನು ಅವರು ಹಂಚಿಕೊಂಡಿದ್ದಾರೆ.

ಆಗಸ್ಟ್ 23ರ ಬುಧವಾರ ಸಂಜೆ 6.04 ನಿಮಿಷಕ್ಕೆ ಸರಿಯಾಗಿ ಚಂದ್ರನ ಅಂಗಳಕ್ಕೆ ವಿಕ್ರಮ್ ಲ್ಯಾಂಡ್ ರೋವರ್ ಇಳಿದಿದೆ. ಈ ಮೂಲಕ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿದ ಮೊದಲ ದೇಶವೆಂಬ ಹೆಗ್ಗಳಿಕೆ ಭಾರತದ ಪಾಲಾಗಿದೆ. ಇಸ್ರೋ ಚಂದ್ರಯಾನ-3 ನೌಕೆಯನ್ನು ಜುಲೈ 14ರಂದು ಉಡಾವಣೆ ಮಾಡಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.