ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ ಪ್ರಕಟ: ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ಪೊಲೀಸರ ವಶಕ್ಕೆ, ಬಿಡುಗಡೆ
ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ಅವರನ್ನು ಕಲಬುರಗಿಯ ಮಾಡಬೂಳ ಠಾಣೆ ಪೊಲೀಸರು ಬುಧವಾರ ವಶಕ್ಕೆ ಪಡೆದಿದ್ದಾರೆ.

ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ಅವರನ್ನು ಕಲಬುರಗಿಯ ಮಾಡಬೂಳ ಠಾಣೆ ಪೊಲೀಸರು ಬುಧವಾರ ವಶಕ್ಕೆ ಪಡೆದಿದ್ದಾರೆ.
ಬಿಜೆಪಿ ಕಾರ್ಯಕರ್ತ ದೇವಾನಂದ ರಾಮಚಂದ್ರ ಕೊರಬ ಅವರ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಬೆಂಬಲಿಗರಾಗಿದ್ದು, ಅವರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ರಾಥೋಡ್ ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು.
ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ ಪ್ರಚಾರ ಮಾಡಿದ ಆರೋಪದಡಿ ಪೊಲೀಸರು ಬುಧವಾರ ಬೆಳಗ್ಗೆ ಅಪಾರ್ಟ್‌ಮೆಂಟ್‌ವೊಂದರಲ್ಲಿ ಬಂಧನಕ್ಕೊಳಪಡಿಸಿದ್ದಾರೆ.
ವಿಚಾರಣೆಯ ನಂತರ ರಾಥೋಡ್ ಅವರನ್ನು ಬಿಡುಗಡೆ ಮಾಡಲಾಯಿತು ಎಂದು ಕಲಬುರಗಿ ಹೆಚ್ಚುವರಿ ಎಸ್ಪಿ ಎನ್ ಶ್ರೀನಿಧಿ ಅವರು ಹೇಳಿದ್ದಾರೆ.
ಬಿಜೆಪಿ ಕಾರ್ಯಕರ್ತ ದೇವಾನಂದ್ ರಾಮಚಂದ್ರ ಕೊರಬ ಅವರ ಹತ್ಯೆಯಲ್ಲಿ ಭಾಗಿಯಾಗಿರುವ ಆರೋಪಿಗಳು ಚಿತ್ತಾಪುರದ ಶಾಸಕರೂ ಆಗಿರುವ ಸಚಿವ ಪ್ರಿಯಾಂಕ್ ಅವರ ಬೆಂಬಲಿಗರಾಗಿರುವ ಕಾರಣ ಪೊಲೀಸರು ಅವರನ್ನು ಬಂಧಿಸುತ್ತಿಲ್ಲ ಎಂದು ರಾಥೋಡ್ ಮಂಗಳವಾರ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದರು.
ಅಲ್ಲದೆ, ರಾಥೋಡ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಬುಧವಾರ ಚಿತ್ತಾಪುರದಲ್ಲಿ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದರು. ಆದರೆ, ಕಲಬುರಗಿಯಿಂದ ಚಿತ್ತಾಪುರಕ್ಕೆ ತೆರಳುವುದಕ್ಕೂ ಮುನ್ನವೇ ರಾಥೋಡ್ ಅವರನ್ನು ಬಂಧಿಸಲಾಗಿದೆ.
ರಾಥೋಡ್ ಬಂಧನದ ಬಳಿಕ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ರಾಥೋಡ್ ಬಿಡುಗಡೆಗೆ ಒತ್ತಾಯಿಸಿ ಒತ್ತಾಯಿಸಿದರು.
ಮಣಿಕಂಠ ರಾಥೋಡ್ ಅವರು, ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಚಿತ್ತಾಪುರದಿಂದ ಪ್ರಿಯಾಂಕ್ ವಿರುದ್ಧ 14,968 ಮತಗಳ ಅಂತರದಿಂದ ಸೋಲು ಕಂಡಿದ್ದರು.
ರಾಥೋಡ್ ವಿರುದ್ಧ ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಹಲವು ಪ್ರಕರಣಗಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


