ಬಾಗಲಕೋಟೆ: 17 ದಿನ ಮಗು ಸೇರಿ ಮೂರು ಮಕ್ಕಳೊಂದಿಗೆ ಬಾವಿಗೆ ಹಾರಿದ್ದ ತಾಯಿ ರಕ್ಷಣೆ, ಮಕ್ಕಳು ನೀರುಪಾಲು!
ಮೂವರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ನಡೆದಿದೆ.

ಬಾಗಲಕೋಟೆ: ಮೂವರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಕುಂಬಾರಹಳ್ಳ ಗ್ರಾಮದ ತೋಟದ ಮನೆಯಲ್ಲಿ ಈ ದುರ್ಘಟನೆ ನಡೆದಿದ್ದು ಈ ವೇಳೆ ಕುಂಬಾರಹಳ್ಳ ಗ್ರಾಮದ 28 ವರ್ಷದ ಸಂಗೀತಾ ಬದುಕುಳಿದಿದ್ದಾಳೆ. ಆದರೆ ಮೂವರು ಮಕ್ಕಳೂ ನೀರುಪಾಲಾಗಿದ್ದಾರೆ.
ಮೃತ ಮಕ್ಕಳಲ್ಲಿ 17 ದಿನದ ಹೆಣ್ಣುಮಗೂವು ಸೇರಿದೆ. ಇನ್ನುಳಿದಂತೆ 6 ವರ್ಷದ ಮಗ ಶ್ರೀಶೈಲ ಹಾಗೂ ನಾಲ್ಕು ವರ್ಷದ ಹೆಣ್ಣುಮಗು ಶ್ರಾವಣಿ ಮೃತಪಟ್ಟಿದ್ದಾಳೆ.
ಈ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಜಮಖಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಸಿಪಿಐ ಮಲ್ಲಪ್ಪ ಮಡ್ಡಿ ಭೇಟಿ ನೀಡಿದ್ದರು. ಸದ್ಯ ಮೃತ ಮಕ್ಕಳ ಮೃತದೇಹವನ್ನು ಹೊರತೆಗೆಯಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


