ರಾಜ್ಯ

ಕೊಡಗಿನಲ್ಲಿ ಕಾಡಾನೆ ದಾಳಿ: ರೈತ ಸಾವು

ಉತ್ತರ ಕೊಡಗಿನಲ್ಲಿ ಕಾಡಾನೆ ದಾಳಿ ಹೆಚ್ಚುತ್ತಿದ್ದು, ಶುಕ್ರವಾರ ಆನೆ ದಾಳಿಗೆ ರೈತರೊಬ್ಬರು ಬಲಿಯಾಗಿದ್ದಾರೆ. ಕಳೆದ ಎರಡು ವಾರಗಳಲ್ಲಿ ಜಿಲ್ಲೆಯಲ್ಲಿ ವರದಿಯಾದ ಮೂರನೇ ಆನೆ ದಾಳಿ ಇದಾಗಿದೆ.

ಕೊಡಗಿನಲ್ಲಿ ಕಾಡಾನೆ ದಾಳಿ: ರೈತ ಸಾವು
ಸಾಂದರ್ಭಿಕ ಚಿತ್ರ
Published On :

ಮಡಿಕೇರಿ: ಉತ್ತರ ಕೊಡಗಿನಲ್ಲಿ ಕಾಡಾನೆ ದಾಳಿ ಹೆಚ್ಚುತ್ತಿದ್ದು, ಶುಕ್ರವಾರ ಆನೆ ದಾಳಿಗೆ ರೈತರೊಬ್ಬರು ಬಲಿಯಾಗಿದ್ದಾರೆ. ಕಳೆದ ಎರಡು ವಾರಗಳಲ್ಲಿ ಜಿಲ್ಲೆಯಲ್ಲಿ ವರದಿಯಾದ ಮೂರನೇ ಆನೆ ದಾಳಿ ಇದಾಗಿದೆ. 

ಸೋಮವಾರಪೇಟೆ ತಾಲೂಕಿನ ಬಾಣಾವರ ಅರಣ್ಯ ವ್ಯಾಪ್ತಿಯ ಆದಿನಾದೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಮೃತ ರೈತನನ್ನು ಬಣಗೇರಿ ಈರಪ್ಪ(63) ಎಂದು ಗುರುತಿಸಲಾಗಿದೆ. ಕಾಣೆಯಾದ ಹಸು ಹುಡುಕಿಕೊಂಡು ಹೋಗಿದ್ದ ರೈತನ ಮೇಲೆ ಆನೆ ದಾಳಿ ಮಾಡಿದೆ. ದಾಳಿಗೊಳಗಾದ ಈರಪ್ಪ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಆನೆ ಓಡಿಸುವ ಪ್ರಯತ್ನ ಮಾಡಿದ್ದಾರೆ.

ಘಟನೆ ಕುರಿತು ಸೋಮವಾರಪೇಟೆ ಪೊಲೀಸರು ಹಾಗೂ ಸೋಮವಾರಪೇಟೆ ವಿಭಾಗದ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಘಟನಾ ಸ್ಥಳಕ್ಕೆ ಎಸಿಎಫ್ ಗೋಪಾಲ್ ಮತ್ತಿತರರು ಭೇಟಿ ನೀಡಿದ್ದರು. 

ಈರಪ್ಪ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ನಂತರ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. 
ಈ ಸಂಬಂಧ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಮಡಿಕೇರಿ ಡಿಸಿಎಫ್ ಎಟಿ ಪೂವಯ್ಯ ಅವರು ಆಸ್ಪತ್ರೆಯಲ್ಲಿ ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿ, ಘಟನೆಯ ಮಾಹಿತಿ ಸಂಗ್ರಹಿಸಿದರು ಮತ್ತು ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.