ಇಂದು ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ: ಮನೆ-ಮನಗಳಲ್ಲಿ ಭಕ್ತಿಯ ಪೂಜೆ, ದೇವಸ್ಥಾನಗಳಲ್ಲಿ ವಿಶೇಷ ಅಲಂಕಾರ, ಸೇವೆ
ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಹಬ್ಬಗಳ ಸಾಲು...ಸಾಲು ಆರಂಭ. ಇಂದು ನಾಡಿನೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ. ಹಬ್ಬವನ್ನು ಬೆಳಗ್ಗೆಯಿಂದಲೇ ನಾಡಿನ ಜನತೆ ಭಕ್ತಿ, ಭಾವ ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ.

ಬೆಂಗಳೂರು: ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಹಬ್ಬಗಳ ಸಾಲು...ಸಾಲು ಆರಂಭ. ಇಂದು ನಾಡಿನೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ. ಹಬ್ಬವನ್ನು ಬೆಳಗ್ಗೆಯಿಂದಲೇ ನಾಡಿನ ಜನತೆ ಭಕ್ತಿ, ಭಾವ ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ.
ಶ್ರಾವಣ ಮಾಸದ ಎರಡನೇ ಶುಕ್ರವಾರ ಆಚರಿಸುವ ಹಬ್ಬವೇ ವರಮಹಾಲಕ್ಷ್ಮಿ. ಬೆಂಗಳೂರಿನ ಲಕ್ಷ್ಮಿ ದೇವಸ್ಥಾನಗಳಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಮಹಾಲಕ್ಷ್ಮಿ ಲೇಔಟ್ನಲ್ಲಿರುವ ಲಕ್ಷ್ಮಿ ದೇವಸ್ಥಾನದಲ್ಲಿ ಇಂದು ಬೆಳ್ಳಗ್ಗೆ 5 ಗಂಟೆಯಿಂದಲೇ ಅಮ್ಮನವರಿಗೆ ಪಂಚಾಭಿಷೇಕ, ಪುಷ್ಪಭಿಷೇಕ ನೇರೆವೇರುತ್ತಿದ್ದು ವಿಶೇಷ ಅಲಂಕಾರದ ನಂತರ ಬರುವ ಭಕ್ತಾದಿಗಳಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ.
ಮತ್ತೊಂದೆಡೆ ನಗರದ ಬನಶಂಕರಿ, ಮಹಾಲಕ್ಷ್ಮಿ ಲೇಔಟ್ನ ಲಕ್ಷ್ಮಿ ದೇವಸ್ಥಾನ, ಕೆಆರ್ಮಾರ್ಕೆಟ್ನ ಕೋಟೆ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದೆ. ಇನ್ನು ಮುನ್ನುರಾಯಿ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ ವರಮಹಾಲಕ್ಷ್ಮಿ ವೃತ, ಸ್ತ್ರೋತ್ರ ಅರ್ಚನೆ, ಮಹಿಳೆಯರಿಂದ ಕುಂಕುಮಾರ್ಚನೆ, ಲಲಿತಾ ಸಹಸ್ರನಾಮ ಪಠಣ, ಮಹಿಳೆಯರಿಗೆ ಬಾಗಿನ, ಅರಶಿನ ಕುಂಕುಮ ನೀಡುವ ಪದ್ಧತಿಗಳಿವೆ. ದೇವಿಗೆ ವಿವಿಧ ಸೇವೆಗಳನ್ನು ನಡೆಸಲಾಗುತ್ತಿದೆ.
ಹಬ್ಬದ ನಿಮಿತ್ತ ಮಾರುಕಟ್ಟೆಯಲ್ಲಿ ಬಾಳೆಎಲೆ, ಹೂವು, ಹಣ್ಣು ಹಾಗೂ ಇತರ ಪೂಜಾ ಸಾಮಗ್ರಿಗಳ ಖರೀದಿ ಜೋರಾಗಿಯೇ ನಡೆದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ನಗರಗಳ ಮಾರುಕಟ್ಟೆಗಳಲ್ಲಿ ಜನಜಂಗುಳಿ ಇದೆ. ಈ ಮಧ್ಯೆ ಬೆಲೆ ಏರಿಕೆ ಕೂಡ ಗ್ರಾಹಕರನ್ನು ತಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


