ಮೈಸೂರಿನಲ್ಲಿ ತಂದೆ-ತಾಯಿ ಸೇರಿ ಒಂದೇ ಕುಟುಂಬದ ನಾಲ್ವರ ಮೃತದೇಹ ಪತ್ತೆ!
ಮೈಸೂರಿನ ಚಾಮುಂಡಿಪುರಂ ಬಡಾವಣೆಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ ಆಗಿರುವಂತಹ ಘಟನೆ ನಡೆದಿದೆ.

ಮೈಸೂರು: ಮೈಸೂರಿನ ಚಾಮುಂಡಿಪುರಂ ಬಡಾವಣೆಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ ಆಗಿರುವಂತಹ ಘಟನೆ ನಡೆದಿದೆ.
ಮೃತರನ್ನು 48 ವರ್ಷದ ಮಹದೇವಸ್ವಾಮಿ, 35 ವರ್ಷದ ಅನಿತಾ, ಪುತ್ರಿಯರಾದ 17 ವರ್ಷದ ಚಂದ್ರಕಲಾ ಮತ್ತು 15 ವರ್ಷದ ಧನಲಕ್ಷ್ಮೀ ಎಂದು ತಿಳಿದುಬಂದಿದೆ.
ಮಹದೇವ ಸ್ವಾಮಿ ಶವ ಹಾಲ್‌ನಲ್ಲಿ ಪತ್ತೆಯಾಗಿದ್ದರೆ ಅನಿತ ಮೃತದೇಹ ಕುರ್ಚಿ ಮೇಲಿದ್ದು ದೊಡ್ಡ ಮಗಳು ಚಂದ್ರಕಲಾ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ ಚಿಕ್ಕ ಮಗಳು ಧನಲಕ್ಷ್ಮಿ ಮೃತದೇಹ ರೂಂನಲ್ಲಿ ಪತ್ತೆಯಾಗಿದೆ.
ಮೈಸೂರು ತಾಲ್ಲೂಕಿನ ಬರಡನಪುರ ಗ್ರಾಮದವರಾಗಿದ್ದ ಮಹದೇವಸ್ವಾಮಿ ಅವರು ಎರಡು ತಿಂಗಳ ಹಿಂದೆ ಚಾಮುಂಡಿಪುರಂ ಬಡಾವಣೆಯಲ್ಲಿ ಬಾಡಿಗೆ ಮನೆ ಪಡೆದು ಕುಟುಂಬ ವಾಸವಾಗಿದ್ದರು. ಮಹದೇವಸ್ವಾಮಿ ಅವರು ಬಂಡಿಪಾಳ್ಯದಲ್ಲಿ ಮಳಿಗೆ ಹೊಂದಿದ್ದರು.
ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


