ಬೆಂಗಳೂರಿನಲ್ಲಿ ಎಂಟು ವಾಹನಗಳಿಗೆ ಡಿಕ್ಕಿ ಹೊಡೆದ ಲಾರಿ; ಸರಣಿ ಅಪಘಾತದಲ್ಲಿ ವ್ಯಕ್ತಿ ಸಾವು, ಇಬ್ಬರಿಗೆ ಗಾಯ
ಲಾರಿಯೊಂದು ಎಂಟು ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ಸರಣಿ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವಿಗೀಡಾಗಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಶುಕ್ರವಾರ ರಾತ್ರಿ ಬಾಣಸವಾಡಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಯಾಣ್ ನಗರದಲ್ಲಿ ಈ ಘಟನೆ ನಡೆದಿದೆ

ಬೆಂಗಳೂರು: ಲಾರಿಯೊಂದು ಎಂಟು ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ಸರಣಿ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವಿಗೀಡಾಗಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಶುಕ್ರವಾರ ರಾತ್ರಿ ಬಾಣಸವಾಡಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಯಾಣ್ ನಗರದಲ್ಲಿ ಈ ಘಟನೆ ನಡೆದಿದೆ.
ಮೃತರನ್ನು ಹಾಸನ ಮೂಲದ ಯಲಹಂಕ ನಿವಾಸಿ ನೇಮರಾಜ್ (37) ಎಂದು ಗುರುತಿಸಲಾಗಿದೆ. ಆರು ತಿಂಗಳ ಹಿಂದೆ ನೇಮರಾಜ್ ಮದುವೆಯಾಗಿದ್ದು, ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಅಪಘಾತದಲ್ಲಿ ಗಾಯಗೊಂಡಿರುವವರನ್ನು ಮುತ್ತುರಾಜ್ ಮತ್ತು ರಾಜೇಶ್ ಎಂದು ಗುರುತಿಸಲಾಗಿದೆ.
ಹಿಂದೂಪುರದಿಂದ ಕೆಆರ್ ಪುರಂ ಕಡೆಗೆ ಬರುತ್ತಿದ್ದ ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ತುಂಬಿಕೊಂಡಿದ್ದ ಲಾರಿಯೊಂದು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ಐದು ಕಾರು, ಎರಡು ಲಾರಿ ಹಾಗೂ ಬೈಕ್ ಜಖಂಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಬೈಕ್ ಗಳ ನಡುವೆ ಡಿಕ್ಕಿ: ಉಪನ್ಯಾಸಕ, ಶಿಕ್ಷಕಿ ಸಾವು
ಘಟನೆಯಲ್ಲಿ ಬೈಕ್ ಸವಾರ ನೇಮರಾಜ್ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವಿಗೀಡಾಗಿದ್ದು, ಕಾರಿನಲ್ಲಿದ್ದ ಮುತ್ತುರಾಜ್ ಮತ್ತು ರಾಜೇಶ್ ಗಾಯಗೊಂಡಿದ್ದಾರೆ.
ಆರೋಪಿ ಲಾರಿ ಚಾಲಕ ಚಂದ್ರಶೇಖರ್ ಕುಡಿದ ಅಮಲಿನಲ್ಲಿ ವಾಹನ ಚಲಾಯಿಸುತ್ತಿದ್ದ ಎಂಬುದು ತನಿಖೆಯಿಂದ ತಿಳಿದು ಬಂದಿದ್ದು, ಆತನನ್ನು ಬಂಧಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


