ರಾಜ್ಯ

ಮಾನವೀಯತೆ ಮೆರೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್: ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಯುವಕರನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ

ಬೈಕ್ ಹಾಗೂ‌ ಆಟೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ ಇಬ್ಬರು ಯುವಕರ ನೆರವಿಗೆ ಧಾವಿಸುವ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾನವೀಯತೆ ಮೆರೆದಿದ್ದಾರೆ.

ಮಾನವೀಯತೆ ಮೆರೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್: ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಯುವಕರನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ
ಅಪಘಾತದಿಂದ ರಕ್ತದ ಮಡುವನಲ್ಲಿ ಬಿದ್ದಿರುವ ಯುವಕರನ್ನು ಆಸ್ಪತ್ರೆಗೆ ಸಾಗಿಸಲು ನೆರವಾದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
Published On :

ಚಾಮರಾಜನಗರ. ಬೈಕ್ ಹಾಗೂ‌ ಆಟೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ ಇಬ್ಬರು ಯುವಕರ ನೆರವಿಗೆ ಧಾವಿಸುವ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾನವೀಯತೆ ಮೆರೆದಿದ್ದಾರೆ. 

ಗೃಹಲಕ್ಷ್ಮಿ ಯೋಜನೆ ಚಾಲನಾ ಸಮಾರಂಭದ ಹಿನ್ನೆಲೆಯಲ್ಲಿ ಚಾಮರಾಜನಗರದಲ್ಲಿ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ಬಳಿಕ ಸಚಿವರು, ಮಂಡ್ಯಕ್ಕೆ ತೆರಳುತ್ತಿದ್ದಾಗ, ಸಂತೇಮರಳ್ಳಿ ಮುಖ್ಯ ರಸ್ತೆಯ ದೊಡ್ಡರಾಯಪೇಟೆ ಕ್ರಾಸ್ ಬಳಿ  ಬೈಕ್ ನಲ್ಲಿ ಚಲಿಸುತ್ತಿದ್ದ ಇಬ್ಬರು ಯುವಕರು ಆಟೋ‌ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಬಿದ್ದು ನರಳುತ್ತಿದ್ದರು. ಇದೇ ಮಾರ್ಗದಲ್ಲಿ ಚಲಿಸುತ್ತಿದ್ದ ಸಚಿವರು, ತಮ್ಮ ಕಾರನ್ನು ನಿಲ್ಲಿಸಿ ಆಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು. ಕೆಲಸದ ಒತ್ತಡದ ಮಧ್ಯೆಯೂ ಸಚಿವರು ಗಾಯಾಳುಗಳನ್ನು ಸಾಗಿಸಲು ಎಲ್ಲ ವ್ಯವಸ್ಥೆ ಮಾಡಿದರು. 

ಈ ವೇಳೆ ಸ್ಥಳೀಯರು ದೊಡ್ಡಪೇಟೆ ಕ್ರಾಸ್ ನಲ್ಲಿ ಪದೆ ಪದೇ ಅಪಘಾತ ಸಂಭವಿಸುತ್ತಿದ್ದು, ಇದಕ್ಕೆ ಪರಿಹಾರ ಕೊಡಿಸಬೇಕು ಎಂದು ಮನವಿ ಮಾಡಿದರು. ಗಾಯಾಳುಗಳಿಗೆ ನೆರವಾದ ಸಚಿವರ ಮಾನವೀಯತೆ ಕಾರ್ಯ ಸ್ಥಳೀಯರು ಮೆಚ್ಚುಗೆ ಪಾತ್ರವಾಯಿತು.      

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.