ರಾಜ್ಯ

ರಾಮನಗರ: KSRTC ಬಸ್ ಕಾರಿನ ನಡುವೆ ಡಿಕ್ಕಿ: ಕಾರಿನಲ್ಲಿದ್ದ ಆರು ಮಂದಿ ದುರ್ಮರಣ

ಮಲೆ ಮಹದೇಶ್ವರ ಬೆಟ್ಟದಿಂದ ವಾಪಸಾಗುತ್ತಿದ್ದಾಗ ಕಾರು ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ದುರ್ಮರಣ ಹೊಂದಿದ್ದಾರೆ.

ರಾಮನಗರ: KSRTC ಬಸ್ ಕಾರಿನ ನಡುವೆ ಡಿಕ್ಕಿ: ಕಾರಿನಲ್ಲಿದ್ದ ಆರು ಮಂದಿ ದುರ್ಮರಣ
ಅಪಘಾತದ ದೃಶ್ಯ
Published On :

ಕನಕಪುರ: ಮಲೆ ಮಹದೇಶ್ವರ ಬೆಟ್ಟದಿಂದ ವಾಪಸಾಗುತ್ತಿದ್ದಾಗ ಕಾರು ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ದುರ್ಮರಣ ಹೊಂದಿದ್ದಾರೆ. 

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೆಮ್ಮಾಳೆ ಗೇಟ್ ಬಳಿ ಅಪಘಾತ ಸಂಭವಿಸಿದ್ದು ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. 

ಕೆಎ01ಎಂಎಫ್ 8055 ಸಂಖ್ಯೆಯ ಟೊಯೊಟೊ ಕ್ವಾಲಿಸ್ ಕಾರಿನಲ್ಲಿ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಇನ್ನು ಅಪಘಾತದ ವೇಳೆ ಕಾರಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಕ್ರೇನ್ ಮೂಲಕ ಹೊರತೆಗೆದು ಆಸ್ಪತ್ರೆಗೆ ರವಾನಿಸಲಾಗಿದೆ.

ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.