ಹಲ್ಲೆ ಪ್ರಕರಣ: ಮಾಜಿ ಸಚಿವ ಮುರುಗೇಶ ನಿರಾಣಿ ವಿರುದ್ಧ ಎಫ್ಐಆರ್ ದಾಖಲು
ರೈತ ಮುಖಂಡ ಯಲ್ಲಪ್ಪ ಹೆಗಡೆ ಎಂಬುವರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಮಾಜಿ ಸಚಿವ ಮುರುಗೇಶ್ ನಿರಾಣಿ ಮತ್ತು ಅವರ ಸಹೋದರ ಸಂಗಮೇಶ್ ನಿರಾಣಿ ವಿರುದ್ಧ ಬಾಗಲಕೋಟೆಯ ಮುಧೋಳ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಬಾಗಲಕೋಟೆ: ರೈತ ಮುಖಂಡ ಯಲ್ಲಪ್ಪ ಹೆಗಡೆ ಎಂಬುವರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಮಾಜಿ ಸಚಿವ ಮುರುಗೇಶ್ ನಿರಾಣಿ ಮತ್ತು ಅವರ ಸಹೋದರ ಸಂಗಮೇಶ್ ನಿರಾಣಿ ವಿರುದ್ಧ ಬಾಗಲಕೋಟೆಯ ಮುಧೋಳ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸಾಮಾಜಿಕ ಕಾರ್ಯಕರ್ತ ಹನುಮಂತ ಶಿಂಧೆ ಅವರು ನೀಡಿರುವ ದೂರು ಆಧರಿಸಿ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ರೈತ ಮುಖಂಡ ಯಲ್ಲಪ್ಪ ಹೆಗಡೆ ಮೇಲೆ ಇಂಗಳಗಿ ಕ್ರಾಸ್ ಬಳಿ ಅಪರಿಚಿತ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು.
ಸಾಮಾಜಿಕ ಕಾರ್ಯಕರ್ತ ಹನುಮಂತ ಶಿಂಧೆ ಜೊತೆ ಕಾರಿನಲ್ಲಿ ತೆರಳುತ್ತಿದ್ದಾಗ ಯಲ್ಲಪ್ಪ ಅವರ ಮೇಲೆ ಹಲ್ಲೆ ನಡೆಸಿದ್ದು, ನಿರಾಣಿ ಸಹೋದರರ ಆರು ಗೂಂಡಾಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆಯಲ್ಲಿ ಯಲ್ಲಪ್ಪ ಹೆಗಡೆ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


