ಚುನಾವಣಾ ಅಕ್ರಮ ಪ್ರಕರಣ: ಶಾಸಕ ರಿಜ್ವಾನ್ ಅರ್ಷದ್‌ಗೆ ನೋಟಿಸ್ ಜಾರಿ
ಕಳೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ರಿಜ್ವಾನ್ ಅರ್ಷದ್ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಚುನಾವಣಾ ಅರ್ಜಿ ಸಲ್ಲಿಕೆಯಾಗಿದೆ.

ಬೆಂಗಳೂರು: ಕಳೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ರಿಜ್ವಾನ್ ಅರ್ಷದ್ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಚುನಾವಣಾ ಅರ್ಜಿ ಸಲ್ಲಿಕೆಯಾಗಿದೆ.
ಬೆಂಗಳೂರು ಸಂಪಂಗಿ ರಾಮನಗರದ ನಿವಾಸಿ ಬಿ ಲಕ್ಷ್ಮಿದೇವಿ ಎಂಬುವವರು ಈ ಅರ್ಜಿ ಸಲ್ಲಿಸಿದ್ದು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ನೇತೃತ್ವದ ಏಕಸದಸ್ಯ ಪೀಠದ ಮುಂದೆ ಅರ್ಜಿಯು ವಿಚಾರಣೆಗೆ ಮಂಗಳವಾರ ಬಂದಿತ್ತು.
ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ಅವರ ವಾದವನ್ನು ಆಲಿಸಿದ ಪೀಠವು ಶಾಸಕ ರಿಜ್ವಾನ್ ಅರ್ಷದ್ ಅವರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಮುಂದೂಡಿತು.
ಕಾಂಗ್ರೆಸ್ ಪಕ್ಷ ಪ್ರಕಟಿಸಿದ ಗ್ಯಾರಂಟಿ ಯೋಜನೆಗಳು ಕೊಡುಗೆ ಹಾಗೂ ಭರವಸೆ ಸ್ವರೂಪದ್ದಾಗಿವೆ. ಗ್ಯಾರಂಟಿ ಯೋಜನೆಗಳನ್ನು ಪಕ್ಷದ ಅಭ್ಯರ್ಥಿಗಳ ಸಮ್ಮತಿಯೊಂದಿಗೆ ಪ್ರಕಟಿಸಲಾಗಿದೆ. ಅವು ಶಿವಾಜಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತಹಾಕಲು ಮತದಾರರನ್ನು ಪ್ರೇರೇಪಿಸಿದೆ. ಆ ಮೂಲಕ ರಿಜ್ವಾನ್ ಅರ್ಷದ್ ಚುನಾವಣೆಯಲ್ಲಿ ಅಕ್ರಮ ಎಸಗಿದ್ದಾರೆ. ಮತದಾರರಿಗೆ ಆಮಿಷವೊಡುವುದು ಲಂಚ ಮತ್ತು ಭ್ರಷ್ಟಚಾರಕ್ಕೆ ಸಮವಾಗಿದೆ ಎಂಬುದು ಅರ್ಜಿದಾರರ ಆಕ್ಷೇಪವಾಗಿದೆ.
ಕಾಂಗ್ರೆಸ್ ವತಿಯಿಂದ ಗ್ಯಾರಂಟಿ ಕಾರ್ಡ್ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಿರುವುದು ಪ್ರಜಾಪ್ರತಿನಿಧಿ ಕಾಯಿದೆ ಸೆಕ್ಷನ್ 123 (1) ಪ್ರಕಾರ ಮತ್ತು ಸೆಕ್ಷನ್ 123 (2) ಪ್ರಕಾರ ಮತದಾರರ ಮೇಲೆ ಪ್ರಭಾವ ಬೀರುವ ಯತ್ನವಾಗಿದೆ. ಸೆಕ್ಷನ್ 123 (4)ರ ಪ್ರಕಾರ ಆಮಿಷವೊಡ್ಡಿ ಪ್ರಚಾರ ಮಾಡುವುದೂ ಅಪರಾಧವಾಗಿದೆ. ಹೀಗಾಗಿ, ಶಿವಾಜಿನಗರ ಕ್ಷೇತ್ರದಿಂದ ರಿಜ್ವಾನ್ ಅರ್ಷದ್ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


