ತೀವ್ರ ಜ್ವರ: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು
ತೀವ್ರ ಜ್ವರ ಹಿನ್ನೆಲೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಂದು ಬುಧವಾರ ಬೆಳಗಿನ ಜಾವ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಏಕಾಏಕಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

ಬೆಂಗಳೂರು: ತೀವ್ರ ಜ್ವರ ಹಿನ್ನೆಲೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಂದು ಬುಧವಾರ ಬೆಳಗಿನ ಜಾವ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಏಕಾಏಕಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆ ಇಂದು ಅವರ ಕೋಲಾರ ಭೇಟಿ ರದ್ದು ಮಾಡಲಾಗಿದೆ. ಕೋಲಾರದ ಶ್ರೀನಿವಾಸಪುರದಲ್ಲಿ ಕುಮಾರಸ್ವಾಮಿ ಅವರು ರೈತರ ಜಮೀನುಗಳಿಗೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತು, ಅರಣ್ಯ ಇಲಾಖೆ ಒತ್ತುವರಿ ತೆರವು ವೇಳೆ ರೈತರ ಬೆಳೆಗಳು ನಷ್ಟವಾಗಿತ್ತು. ಈ ಪರಿಣಾಮ ರೈತರೊಂದಿಗೆ ಮಾತನಾಡಲು ಹೆಚ್ಡಿಕೆ ಆಗಮಿಸಲಿದ್ದರು. ಆದರೆ ಈಗ ಆಸ್ಪತ್ರೆಗೆ ದಾಖಲಾದ ಹಿನ್ನೆಲೆ ಕೋಲಾರ ಪ್ರವಾಸ ರದ್ದಾಗಿದೆ.
ಮೂರು ತಿಂಗಳ ಹಿಂದೆ ಸಹ ಆಸ್ಪತ್ರೆಗೆ ದಾಖಲು: ಕರ್ನಾಟಕ ವಿಧಾನಸಭೆ ಚುನಾವಣೆ ಸಮಯದಲ್ಲಿ ಪಕ್ಷದ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ವೇಳೆಯೂ ಆಯಾಸದಿಂದಾಗಿ ಜ್ವರ ಕಾಣಿಸಿಕೊಂಡು ಕುಮಾರಸ್ವಾಮಿಯವರು ಆಸ್ಪತ್ರೆಗೆ ದಾಖಲಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


