ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್2ನಲ್ಲಿ ಅಂತಾರಾಷ್ಟ್ರೀಯ ವಿಮಾನದ ಕಾರ್ಯಾಚರಣೆ ಮುಂದೂಡಿಕೆ
ಆಗಸ್ಟ್ 31ರಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ ೨ನಿಂದ ಪ್ರಾರಂಭವಾಗಬೇಕಿದ್ದ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಬಿಐಎಎಲ್ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರು: ಆಗಸ್ಟ್ 31ರಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ ೨ನಿಂದ ಪ್ರಾರಂಭವಾಗಬೇಕಿದ್ದ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಬಿಐಎಎಲ್ ಪ್ರಕಟಣೆಯಲ್ಲಿ ತಿಳಿಸಿದೆ.
ಆಗಸ್ಟ್ 31ರಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತಾರಾಷ್ಟ್ರೀಯ ಕಾರ್ಯಾಚರಣೆಗಳನ್ನು ಟರ್ಮಿನಲ್2 ಗೆ ಸ್ಥಳಾಂತರಿಸಲು ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ, ಅಂತಿಮ ಕ್ಷಣದಲ್ಲಿ ಈ ಸ್ಥಳಾಂತರ ಕಾರ್ಯವನ್ನು ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ಆ.31ರಂದೇ ಘೋಷಿಸಲಿದೆ.
ನಮ್ಮ ಪ್ರಯಾಣಿಕರಿಗೆ ಸೂಕ್ತ ಮತ್ತು ತಡೆರಹಿತ ಸ್ಥಿತ್ಯಂತರವನ್ನು ಒದಗಿಸುವ ಸಲುವಾಗಿ ಅಂತಿಮ ಸನ್ನದ್ಧತೆಯ ಪರಿಶೀಲನೆಯ ಸಮಯದಲ್ಲಿ ಕೊನೆಯ ನಿಮಿಷದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಮುಂದಿನ ಸೂಚನೆ ಬರುವವರೆಗೆ ಅಂತಾರಾಷ್ಟ್ರೀಯ ಕಾರ್ಯಾಚರಣೆಗಳು ಟರ್ಮಿನಲ್ 1ರಲ್ಲಿಯೇ ಮುಂದುವರೆಯಲಿದೆ.
ಈ ನಿರ್ಧಾರದಿಂದ ಉಂಟಾದ ಅನಾನುಕೂಲತೆಗಾಗಿ ವಿಷಾದಿಸುತ್ತೇವೆ. ನಮ್ಮ ಪ್ರಯಾಣಿಕರಿಗೆ ಅತ್ಯುತ್ತಮವಾದ ಪ್ರಯಾಣದ ಅನುಭವ ನೀಡುವ ನಿಟ್ಟಿನಲ್ಲಿ ನಮ್ಮ ಬದ್ಧತೆಯನ್ನು ಮುಂದುವರೆಸಲಿದ್ದೇವೆ. ಹೆಚ್ಚಿನ ಮಾಹಿತಿಗಾಗಿ ತಮ್ಮ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಿ, ಮಾಹಿತಿ ಪಡೆಯುವಂತೆ ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ವಿನಂತಿಸುತ್ತೇವೆ ಎಂದು ಬಿಐಎಎಲ್ ಪ್ರಕಟಣೆಯಲ್ಲಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


