ಲಂಚ ಸ್ವೀಕರಿಸುವಾಗ ಆಳಂದ ತಹಶೀಲ್ದಾರ್, ಆರ್ ಐ ರೆಡ್ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ
ಕಲಬುರಗಿ ಜಿಲ್ಲೆಯ ಆಳಂದ ತಹಶೀಲ್ದಾರ್ ಯಲ್ಲಪ್ಪ ಸುಬೇದಾರ್ ಮತ್ತು ರೆವಿನ್ಯೂ ಇನ್ಸ್ಪೆಕ್ಟರ್ ರಾಜಶೇಖರ್ ಅವರು ಗುರುವಾರ ಲಂಚ ಸ್ವೀಕರಿಸುವಾಗ ರೆಡ್ಹ್ಯಾಂಡಾಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ತಹಶೀಲ್ದಾರ್ ಯಲ್ಲಪ್ಪ ಸುಬೇದಾರ್ ಮತ್ತು ರೆವಿನ್ಯೂ ಇನ್ಸ್ಪೆಕ್ಟರ್ ರಾಜಶೇಖರ್ ಅವರು ಗುರುವಾರ ಲಂಚ ಸ್ವೀಕರಿಸುವಾಗ ರೆಡ್ಹ್ಯಾಂಡಾಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಇಂದು ಆಳಂದ ತಾಲೂಕು ಕಚೇರಿಯಲ್ಲೇ ತಹಶೀಲ್ದಾರ್ ಯಲ್ಲಪ್ಪ ಸುಬೇದಾರ್ ಮತ್ತು ಆರ್‌ಐ ರಾಜಶೇಖರ್ ಅವರು ಜಮೀನಿಗೆ ಕೃಷಿಯೇತರ ಪ್ರಮಾಣಪತ್ರ ನೀಡಲು ಮೆಹಬೂಬ್ ಪಟೇಲ್ ಎನ್ನುವವರಿಂದ 12,000 ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು.
ಈ ಸಂಬಂಧ ಮಹೆಬೂಬ್ ಪಟೇಲ್ ಅವರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದು, ಇಂದು 12 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಎಸ್ಪಿ ಕರ್ನೂಲ್ ಅವರ ಮಾರ್ಗದರ್ಶನದಲ್ಲಿ ಸಿಪಿಐಗಳಾದ ನಾನಾಗೌಡ, ದ್ರುವತಾರೆ, ಅಕ್ಕಮಹಾದೇವಿ ಅವರು ದಾಳಿ ನಡೆಸಿ ತಹಶೀಲ್ದಾರ್ ಯಲ್ಲಪ್ಪ ಸುಬೇದಾರ್, ಆರ್‌ಐ ರಾಜಶೇಖರ್ ಅವರನ್ನು ವಶಕ್ಕೆ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


