ರಾಜ್ಯ

ನಿವೃತ್ತ ನ್ಯಾಯಾಧೀಶ ಹುನಗುಂದ ನೇಮಕ ವಿಚಾರ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಕರ್ನಾಟಕ ರಾಜ್ಯ ಮಾನವ ಹಕ್ಕು ಆಯೋಗದ (ಕೆಎಸ್‌ಎಚ್‌ಆರ್‌ಸಿ) ಮಾಜಿ ಸದಸ್ಯ ಸಿ ಜೆ ಹುನಗುಂದ ಅವರನ್ನು ಕರ್ನಾಟಕ ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ನ್ಯಾಯಾಂಗ ಸದಸ್ಯರನ್ನಾಗಿ ನೇಮಕ ಮಾಡಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಹೈಕೋರ್ಟ್‌ ನೋಟಿಸ್ ಜಾರಿ ಮಾಡಿದೆ.

ನಿವೃತ್ತ ನ್ಯಾಯಾಧೀಶ ಹುನಗುಂದ ನೇಮಕ ವಿಚಾರ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌
ಸಂಗ್ರಹ ಚಿತ್ರ
Published On :

ಬೆಂಗಳೂರು: ಕರ್ನಾಟಕ ರಾಜ್ಯ ಮಾನವ ಹಕ್ಕು ಆಯೋಗದ (ಕೆಎಸ್‌ಎಚ್‌ಆರ್‌ಸಿ) ಮಾಜಿ ಸದಸ್ಯ ಸಿ ಜೆ ಹುನಗುಂದ ಅವರನ್ನು ಕರ್ನಾಟಕ ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ನ್ಯಾಯಾಂಗ ಸದಸ್ಯರನ್ನಾಗಿ ನೇಮಕ ಮಾಡಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಹೈಕೋರ್ಟ್‌ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರಿನ ವಕೀಲ ಎಸ್ ಉಮಾಪತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ ಜಿ ಎಸ್ ಕಮಲ್ ಅವರ ನೇತೃತ್ವದ ವಿಭಾಗೀಯ ಪೀಠವು ಪ್ರತಿವಾದಿಗಳಾದ ರಾಜ್ಯ ಸರ್ಕಾರ ಮತ್ತು ಸಿ ಜೆ ಹುನಗುಂದ್ ಅವರಿಗೆ ನೋಟಿಸ್ ಜಾರಿ ಮಾಡಿ, ಆಕ್ಷೇಪಣೆ ಸಲ್ಲಿಸಲು ತಿಳಿಸಿ ವಿಚಾರಣೆಯನ್ನು ಮೂರು ವಾರ ಮುಂದೂಡಿದೆ.

ಹುನಗುಂದ ಅವರು ರಾಮನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾಗಿ ನಿವೃತ್ತರಾಗಿದ್ದರು. ಇದಾದ ಬಳಿಕ ಅವರು 2012ರ ನವೆಂಬರ್ 29 ರಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿದ್ದು, 2017ರ ನವೆಂಬರ್ 28ರಂದು ನಿವೃತ್ತರಾಗಿದ್ದರು.

ಆನಂತರ 2022ರ ಅಕ್ಟೋಬರ್ 20ರಂದು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ನ್ಯಾಯಾಂಗ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಇದು ಕಾನೂನು ಬಾಹಿರ ಕ್ರಮವಾಗಿದ್ದು, ಈ ನೇಮಕಾತಿ ರದ್ದುಪಡಿಸುವಂತೆ ಕೋರಿ ಅರ್ಜಿದಾರರು 2023ರ ಪ್ರತಿವಾದಿಗಳಿಗೆ ಮನವಿ ಮಾಡಿರುವುದಾಗಿ ಅರ್ಜಿಯಲ್ಲಿ ತಿಳಿಸಲಾಗಿದೆ. ಆದರೂ, ಈವರೆಗೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಆದ್ದರಿಂದ ಅವರ ನೇಮಕ ಆದೇಶ ರದ್ದುಪಡಿಸಬೇಕು ಎಂದು ಹೈಕೋರ್ಟ್‌ ಕದತಟ್ಟಿದ್ದಾರೆ.

ಮಾನವ ಹಕ್ಕುಗಳ ಸಂರಕ್ಷಣಾ ಕಾಯಿದೆ ಸೆಕ್ಷನ್ 24(3)ರ ಪ್ರಕಾರ ಯಾವುದೇ ರಾಜ್ಯದ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರಾದವರು ದೇಶದ ಯಾವುದೇ ರಾಜ್ಯದಲ್ಲಿ ಮತ್ಯಾವುದೇ ಹುದ್ದೆಯನ್ನು ಹೊಂದುವುದಕ್ಕೆ ಅವಕಾಶವಿಲ್ಲ ಎಂದು ತಿಳಿಸಲಾಗಿದೆ.

ಆದರೆ, ಈ ಅಂಶವನ್ನು ಮರೆಮಾಚಿ 2022ರ ಅಕ್ಟೋಬರ್ ತಿಂಗಳಿನಿಂದ ಅನ್ವಯವಾಗುವಂತೆ ಬೆಂಗಳೂರಿನ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.