ಬೆಂಗಳೂರು: ಹಾಸ್ಟೆಲ್ ಕಟ್ಟಡದ 6ನೇ ಮಹಡಿಯಿಂದ ಜಿಗಿದು ಐಐಎಸ್‌ಸಿ ವಿದ್ಯಾರ್ಥಿ ಆತ್ಮಹತ್ಯೆ
ಐಐಎಸ್ ಸಿಯಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 21 ವರ್ಷದ ಇಂಟಿಗ್ರೇಟೆಡ್ ಪಿಎಚ್‌ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಕ್ಯಾಂಪಸ್‌ನಲ್ಲಿರುವ ಪುರುಷರ ಹಾಸ್ಟೆಲ್‌ನ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೆಂಗಳೂರು: ಐಐಎಸ್ ಸಿಯಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 21 ವರ್ಷದ ಇಂಟಿಗ್ರೇಟೆಡ್ ಪಿಎಚ್‌ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಕ್ಯಾಂಪಸ್‌ನಲ್ಲಿರುವ ಪುರುಷರ ಹಾಸ್ಟೆಲ್‌ನ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶುಕ್ರವಾರ ಬೆಳಗ್ಗೆ 7.10ರ ಸುಮಾರಿಗೆ ಈ ಘಟನೆ ನಡೆದಿದೆ. ಈ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಮೃತ ವಿದ್ಯಾರ್ಥಿಯನ್ನು ದೆಹಲಿ ಮೂಲದ ಡೈಮಂಡ್ ಕುಶ್ವಾಹ ಎಂದು ಗುರುತಿಸಲಾಗಿದೆ. ಅವರು ರಾಸಾಯನಿಕ ವಿಜ್ಞಾನ ವಿಷಯದಲ್ಲಿ ಇಂಟಿಗ್ರೇಟೆಡ್ ಪಿಎಚ್‌ಡಿ ಎರಡನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.
ಕುಶ್ವಾಹಾ ಶುಕ್ರವಾರ ಬೆಳಿಗ್ಗೆ ಅವರು ಕಟ್ಟಡದ ಆರನೇ ಮಹಡಿಯಿಂದ ಜಿಗಿಯುವ ಮೂಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಯಾವುದೇ ಸೂಸೈಡ್ ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಬಗ್ಗೆ ಆತನ ಪೋಷಕರಿಗೆ ತಿಳಿಸಲಾಗಿದ್ದು, ಅವರು ಬಂದ ನಂತರ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ಸದಾಶಿವನಗರ ಪೊಲೀಸರು ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


