ರಾಜ್ಯ

ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಗೃಹ ಸಚಿವ ಡಾ ಜಿ ಪರಮೇಶ್ವರ್

ನಗರದ ಹಲವು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಮಾಡಿರುವ ಕೃತ್ಯದ ಹಿಂದೆ ಯಾರೇ ತಪ್ಪು ಮಾಡಿದರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ತಿಳಿಸಿದ್ದಾರೆ.

ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಗೃಹ ಸಚಿವ ಡಾ ಜಿ ಪರಮೇಶ್ವರ್
ಬಾಂಬ್ ಇಮೇಲ್ ಬಂದ ಸುದ್ದಿ ಕೇಳಿ ಆತಂಕಗೊಂಡು ಶಾಲೆ ಬಳಿ ಓಡೋಡಿ ಬಂದ ಪೋಷಕರು
Published On :

ಬೆಂಗಳೂರು: ನಗರದ ಹಲವು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಮಾಡಿರುವ ಕೃತ್ಯದ ಹಿಂದೆ ಯಾರೇ ತಪ್ಪು ಮಾಡಿದರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 15ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಇಮೇಲ್ ಬಂದಿರುವ ಘಟನೆ ಬಗ್ಗೆ ಪರಿಶೀಲನೆ ತನಿಖೆ ಮಾಡಿಸುತ್ತೇವೆ, ನಾವು ಮಕ್ಕಳ ವಿಚಾರದಲ್ಲಿ ನಿರ್ಲಕ್ಷ್ಯ ಮಾಡುವಂತಿಲ್ಲ, ಮಕ್ಕಳು ಆತಂಕದಲ್ಲಿ ಶಾಲೆಗೆ ಹೋಗುವಂತಾಗಬಾರದು, ಈ ಪ್ರಕರಣದಲ್ಲಿ ಸರಿಯಾದ ತನಿಖೆ ಮಾಡಿ ಯಾರೇ ತಪ್ಪು ಮಾಡಿದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.

ಇಂತಹ ಸಮಾಜಘಾತುಕ ಕುಕೃತ್ಯದಲ್ಲಿ ತೊಡಗಿರುವವರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ, ಈ ವಿಷಯದಲ್ಲಿ ರಾಜಿ ಮಾಡುವುದಿಲ್ಲ. ನಾವು ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ ಎಂದರು.

ಈ ಘಟನೆ ಬಗ್ಗೆ ಮಾತನಾಡಿರುವ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್, ಬೆಂಗಳೂರು ನಗರದ ಕೆಲವು ಶಾಲೆಗಳಿಗೆ ಬೆದರಿಕೆ ಇಮೇಲ್ ಬಂದಿದೆ. ಈ ಬಗ್ಗೆ ನಮಗೆ ಮಾಹಿತಿ ಬಂದ ಕೂಡಲೇ ಕ್ರಮ ಕೈಗೊಳ್ಳಲಾಗಿದೆ. ಈ ಎಲ್ಲಾ ಶಾಲೆಗಳಿಗೆ ನಮ್ಮ ಬಾಂಬ್ ನಿಷ್ಕ್ರಿಯ ದಳ ಹೋಗಿ ತಪಾಸಣೆ ನಡೆಸಿದೆ. ಈ ಹಿಂದೆಯೂ ಸಹ ಈ ರೀತಿ ಬೆದರಿಕೆ ಕರೆ ಬಂದಿತ್ತು. ಬಹುಶಃ ಇದು ಸುಳ್ಳು ಬಾಂಬ್ ಬೆದರಿಕೆ ಅನ್ನಿಸುತ್ತಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ: ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಆಗಂತುಕರು ಬಾಂಬ್ ಬೆದರಿಕೆ ಹಾಕಿದ್ದಾರೆ. ಇ-ಮೇಲ್ ಮೂಲಕ ನಗರದ ಬಸವೇಶ್ವರ ನಗರದ ನ್ಯಾಪಲ್, ವಿದ್ಯಾಶಿಲ್ಪ ಸೇರಿದಂತೆ 7 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದಾರೆ. ಸದಾಶಿವನಗರದ ನೀವ್ ಅಕಾಡೆಮಿ, ಯಲಹಂಕದ ಕೆಲವು ಶಾಲೆಗಳಿಗೆ ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.