ಹುಸಿಬಾಂಬ್ ಬೆದರಿಕೆ ಇಮೇಲ್: ಇಂದು ಎಂದಿನಂತೆ ಶಾಲೆ ಪುನರಾರಂಭ, 48 ಎಫ್ಐಆರ್ ದಾಖಲು
ನಗರದ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದ ಹಿನ್ನೆಲೆಯಲ್ಲಿ ಬಿಗುವಿನ, ಆತಂಕದ ವಾತಾವರಣ ಸೃಷ್ಟಿಯಾಗಿ ನಿನ್ನೆ ಪೋಷಕರು ಮಕ್ಕಳನ್ನು ಅರ್ಧದಲ್ಲಿಯೇ ಬಂದು ಶಾಲೆಗಳಿಂದ ಮನೆಗೆ ಕರೆದುಕೊಂಡು ಹೋದ ಪ್ರಸಂಗ ನಡೆದಿತ್ತು.

ಬೆಂಗಳೂರು: ನಗರದ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದ ಹಿನ್ನೆಲೆಯಲ್ಲಿ ಬಿಗುವಿನ, ಆತಂಕದ ವಾತಾವರಣ ಸೃಷ್ಟಿಯಾಗಿ ನಿನ್ನೆ ಪೋಷಕರು ಮಕ್ಕಳನ್ನು ಅರ್ಧದಲ್ಲಿಯೇ ಬಂದು ಶಾಲೆಗಳಿಂದ ಮನೆಗೆ ಕರೆದುಕೊಂಡು ಹೋದ ಪ್ರಸಂಗ ನಡೆದಿತ್ತು.
ಅದಾಗಿ ಇಂದು ಶನಿವಾರ ಎಂದಿನಂತೆ ಶಾಲೆಗಳು ಆರಂಭವಾಗಿದ್ದು ಪೋಷಕರು ಮಕ್ಕಳನ್ನು ಕರೆದುಕೊಂಡು ಬಂದು ಬಿಟ್ಟು ಹೋಗುತ್ತಿರುವುದು ಕಂಡುಬಂತು. ಮಕ್ಕಳು ಎಂದಿನಂತೆ ಶಾಲೆಗೆ ಬರುತ್ತಿದ್ದರು. ನಮಗೆ ಶಾಲೆಯಲ್ಲಿ ಪ್ರಾಂಶುಪಾಲರು, ಶಿಕ್ಷಕರು ರಕ್ಷಣೆ ನೀಡುತ್ತಾರೆ ಎಂದು ಮಕ್ಕಳು ಹೇಳುತ್ತಿರುವುದು ಕಂಡುಬಂತು.
48 ಎಫ್ ಐಆರ್ : ಇನ್ನು ನಗರದ ಹಲವು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ ಪ್ರಕರಣ ಸಂಬಂಧ 48 ಎಫ್ಐಆರ್ಗಳು ದಾಖಲಾಗಿವೆ. ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರ ಸೂಚನೆಯಂತೆ ಆಯಾ ಠಾಣಾ ವ್ಯಾಪ್ತಿಯಲ್ಲಿ ಎಫ್ಐಆರ್ಗಳು ದಾಖಲಾಗಿವೆ. ಈ ಎಲ್ಲಾ ಎಫ್ಐಆರ್ಗಳನ್ನು ಕ್ರೋಢೀಕರಿಸಿ ಪೊಲೀಸರು ತನಿಖೆ ನಡೆಸಲಿದ್ದಾರೆ.
ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ, ಬಸ್ ನಿಲ್ದಾಣಗಳಿಗೆ ಬಾಂಬ್ ಬೆದರಿಕೆಗಳು ಅಗ್ಗಾಗೆ ಬರುತ್ತಿರುತ್ತವೆ. ಆದರೆ, ನಿನ್ನೆ ಬೆಂಗಳೂರಿನ 48 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನೆ ಮಾಡಲಾಗಿತ್ತು. ಮೊದಲು 15 ಶಾಲೆಗಳಿಗೆ ಬೆದರಿಕೆ ಇಮೇಲ್ ಬಂದಿದೆ. ಬಳಿಕ ಇನ್ನುಳಿದ ಆಡಳಿತ ಮಂಡಳಿಗಳು ತಮ್ಮ ತಮ್ಮ ಶಾಲೆಯ ಇಮೇಲ್ ಪರಿಶೀಲನೆ ಮಾಡಿದ ಬಳಿಕ 48 ಶಾಲೆಗಳಿಗೆ ಅಂತಹದ್ದೇ ಬೆದರಿಕೆ ಸಂದೇಶಗಳು ಬಂದಿರುವುದು ತಿಳಿದುಬಂದಿದೆ. ಬನ್ನೇರುಘಟ್ಟದ 7 ಶಾಲೆಗಳಿಗೆ, ಹೆಬ್ಬಗೋಡಿಯ 4, ಸರ್ಜಾಪುರದ 5, ಜಿಗಣಿಯ 2 ಶಾಲೆಗಳಿಗೆ ಬೆದರಿಕೆ ಸಂದೇಶಗಳು ಬಂದಿದ್ದವು.
ಬೆಂಗಳೂರಿನ ದಕ್ಷಿಣ ವಲಯ-1 ರಲ್ಲಿ 15 ಶಾಲೆಗಳಿಗೆ, ದಕ್ಷಿಣ ವಲಯ 2ರಲ್ಲಿ 3, ವಲಯ 3ರಲ್ಲಿ 10 ಹಾಗೂ ವಲಯ 4ರಲ್ಲಿ 4 ಶಾಲೆಗಳಿಗೆ ಬೆದರಿಕೆ ಸಂದೇಶಗಳು ಬಂದಿದ್ದವು. ಉತ್ತರ ವಲಯಗಳಲ್ಲಿ ಒಟ್ಟು 7 ಶಾಲೆಗಳಿಗೆ ಹಾಗೂ ಅನೇಕಲ್ ತಾಲೂಕಿನ 5 ಶಾಲೆಗಳಿಗೂ ಇಂತಹದ್ದೇ ಇಮೇಲ್ ಬಂದಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


