ನಾನೇನೂ ಹರಿಶ್ಚಂದ್ರನಲ್ಲ, ಜಲಜೀವನ್ ಮಿಷನ್ ಯೋಜನೆ ಅಕ್ರಮದಲ್ಲಿ ನಾನೂ ಕೂಡ ಭಾಗಿ: ಸಂಸದ ಸಂಗಣ್ಣ ಕರಡಿ
ಕೇಂದ್ರದ ಮಹತ್ವಕಾಂಕ್ಷಿ ಜಲಜೀವನ್ ಮಿಷನ್ ಯೋಜನೆ ಅನುಷ್ಠಾನ ಸಮರ್ಪಕವಾಗಿಲ್ಲ. ರಾಜಕಾರಣಿಗಳೇ ಈ ಯೋಜನೆಯಲ್ಲಿ ಲೂಟಿ ಹೊಡೆದು, ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಸಂಸದ ಕರಡಿ ಸಂಗಣ್ಣ ಆರೋಪಿಸಿದ್ದಾರೆ.

ಕೊಪ್ಪಳ:ಕೇಂದ್ರದ ಮಹತ್ವಕಾಂಕ್ಷಿ ಜಲಜೀವನ್ ಮಿಷನ್ ಯೋಜನೆ ಅನುಷ್ಠಾನ ಸಮರ್ಪಕವಾಗಿಲ್ಲ. ರಾಜಕಾರಣಿಗಳೇ ಈ ಯೋಜನೆಯಲ್ಲಿ ಲೂಟಿ ಹೊಡೆದು, ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಸಂಸದ ಕರಡಿ ಸಂಗಣ್ಣ ಆರೋಪಿಸಿದ್ದಾರೆ.
ಕೊಪ್ಪಳದಲ್ಲಿ ಶುಕ್ರವಾರ ಅಂಚೆ ಕಚೇರಿ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದ ಅವರ, ನಮ್ಮಂಥ ರಾಜಕಾರಣಿಗಳು ಇದರಲ್ಲಿ ಶಾಮೀಲಾಗಿ ಈ ಯೋಜನೆಯನ್ನು ಹಾಳು ಮಾಡಿದ್ದಾರೆ. ಜಿಲ್ಲೆಯ ಯೋಜನೆಯಲ್ಲಿ ಪರಿಷ್ಕೃತ ಅಂದಾಜು ನಡೆದು ಹೊಸ ಡಿಪಿಆರ್ ಮಾಡಲಾಗಿದೆ. ಕಾಮಗಾರಿಯಲ್ಲಿ ನಾನೂ ಸೇರಿ ಅನೇಕ ಜನಪ್ರತಿನಿಧಿಗಳು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಸಂಸದ ಸಂಗಣ್ಣ ಕರಡಿ ಅವರು ತಮ್ಮ ಭ್ರಷ್ಟಾಚಾರವನ್ನು ಬಹಿರಂಗವಾಗಿ ಒಪ್ಪಿಕೊಂಡು ಹೇಳಿಕೆ ನೀಡಿದ್ದಾರೆ.
ಜೆಜೆಎಂ ಕಾಮಗಾರಿಯಲ್ಲಿ ಹಣವನ್ನು ಲೂಟಿ ಹೊಡೆಯಲಾಗುತ್ತಿದೆ. ಜೆಜೆಎಂ ಯೋಜನೆಯ ಕಾಮಗಾರಿಯಲ್ಲಿ ರಿವೈಸ್ ಎಸ್ಟಿಮೇಟ್ನಿಂದ ಹೊಸ ಡಿಪಿಆರ್ ಮಾಡಿಸುವವರೆಗೂ ಹಣ ಲೂಟಿ ಮಾಡಲಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ 123 ಕೋಟಿ ರೂ. ಯೋಜನೆಗೆ ಮತ್ತೆ 6 ತಿಂಗಳಲ್ಲಿ 123 ಕೋಟಿ ರೂ. ಪುನಃ ಅನುದಾನ ಕೇಳಲಾಗಿದೆ. ಅಕ್ರಮದಲ್ಲಿ ಸಂಸದರಿಂದ ಹಿಡಿದು ಎಲ್ಲರೂ ಹಣ ದೋಚಿದ್ದಾರೆ. ಇದರಲ್ಲಿ ನಾನೂ ಕೂಡ ಭಾಗಿಯಾಗಿದ್ದೇನೆ ಎಂದರು.
ನಾವೇನೂ ಹರಿಶ್ಚಂದ್ರನಲ್ಲ, ನ್ಯಾಯ ಅನ್ಯಾಯ ನೋಡಬೇಕು. ಅನ್ಯಾಯದಿಂದ ಹಣ ಗಳಿಸಿದವರು ನೆಮ್ಮದಿಯಿಂದ ನಿದ್ದೆ ಮಾಡಲ್ಲ. ದುಡಿದು ತಿನ್ನೋರು ನೆಮ್ಮದಿಯಿಂದ ನಿದ್ದೆ ಮಾಡುತ್ತಾರೆ. ನಾನು ಮಾಡಿದ ತಪ್ಪಿನ ಅರಿವು ನನಗಿದೆ ಎಂದು ಹೇಳಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


