ರಾಜ್ಯ

ಬೆಂಗಳೂರು: ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಇಬ್ಬರ ಬಂಧನ

ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಜೆಪಿ ನಗರದ ಪಬ್‌ನಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಪಂದ್ಯದ ವೇಳೆ ಪಾಕ್‌ ಪರ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.

ಬೆಂಗಳೂರು: ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಇಬ್ಬರ ಬಂಧನ
ಪಾಕಿಸ್ತಾನ ಪರ ಘೋಷಣೆ- ಇಬ್ಬರ ಬಂಧನ
Published On :

ಬೆಂಗಳೂರು: ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಜೆಪಿ ನಗರದ ಪಬ್‌ನಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಪಂದ್ಯದ ವೇಳೆ ಪಾಕ್‌ ಪರ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.

ಗುರಪ್ಪನಪಾಳ್ಯ ನಿವಾಸಿಗಳಾದ ಇನಾಯತ್ ಉಲ್ಲಾ, ಸೈಯದ್ ಮುಬಾರಕ್ ಬಂಧಿತ ಆರೋಪಿಗಳು. ಜೆ.ಪಿ. ನಗರ ಮೊದಲನೇ ಹಂತದಲ್ಲಿರುವ ಮೋಖಹಾಲಿಕ್ ಪಬ್‌ನಲ್ಲಿ‌ ಭಾರತ ಮತ್ತು ಆಸ್ಟ್ರೇಲಿಯಾ ಮ್ಯಾಚ್‌ ವೀಕ್ಷಿಸುತ್ತಿದ್ದಾಗ ಆರೋಪಿಗಳು ಪಾಕಿಸ್ತಾನಕ್ಕೆ ಜೈಕಾರ ಹಾಕಿದ್ದಾರೆ.

ಇದಕ್ಕೆ ಅಲ್ಲಿದ್ದ ಕೆಲವರು ಆಕ್ಷೇಪಿಸಿದ್ದಾರೆ. ಆದರೂ ಅವರು ಕೂಗಾಡಿದ್ದಾರೆ. ಹೀಗಾಗಿ ಅಲ್ಲಿದ್ದವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಜೆ.ಪಿ ನಗರ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮದ್ಯಪಾನದ ನಶೆಯಲ್ಲಿ ಪಾಕ್‌ ಪರ ಘೋಷಣೆ ಕೂಗಿದ್ದೇವೆ ಎಂದು ಆರೋಪಿಗಳು ವಿಚಾರಣೆ ವೇಳೆ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.