ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆ: ತನಿಖೆಗೆ ವಿಶೇಷ ತಂಡ ರಚನೆ
ರಾಜಧಾನಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ ಸೇರಿ 68 ಶಾಲೆಗಳಿಗೆ ಬಾಂಬ್ ಬೆದರಿಕೆ ಪತ್ರ ಬಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯಾ ಪೊಲೀಸ್ ಠಾಣೆಗಳಲ್ಲಿ ಎಫ್‍ಐಆರ್ ದಾಖಲಿಸಲಾಗಿದ್ದು, ವಿಶೇಷ ತಂಡವನ್ನು ರಚಿಸಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ,

ಬೆಂಗಳೂರು: ರಾಜಧಾನಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ ಸೇರಿ 68 ಶಾಲೆಗಳಿಗೆ ಬಾಂಬ್ ಬೆದರಿಕೆ ಪತ್ರ ಬಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯಾ ಪೊಲೀಸ್ ಠಾಣೆಗಳಲ್ಲಿ ಎಫ್‍ಐಆರ್ ದಾಖಲಿಸಲಾಗಿದ್ದು, ವಿಶೇಷ ತಂಡವನ್ನು ರಚಿಸಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ,
ಪ್ರಕರಣದ ತನಿಖೆಗಾಗಿ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಎನ್.ಸತೀಶ್ ಕುಮಾರ್ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿದೆ.
ಇಮೇಲ್‌ಗಳನ್ನು ವಿದೇಶದಿಂದ 'khharijites@beeble.com' ಎಂಬ ಇಮೇಲ್ ಮೂಲಕ ಕಳುಹಿಸಲಾಗಿದೆ, ಕಂಪನಿಯ ಡೊಮೇನ್ ಮೂಲಕ ಕಳುಹಿಸಿದ್ದರಿಂದ ಸೈಬರ್ ಕ್ರೈಂ ಪೊಲೀಸರು ಬೀಬಲ್‌ಗೆ ಇಮೇಲ್ ಕಳುಹಿಸಿದ್ದಾರೆಂಗು ಅಧಿಕಾರಿಯೊಬ್ಬರು ಹೇಳಿದ್ದಾರೆ.
ದೂರವಾಣಿ ಕರೆಗಳನ್ನು ಪತ್ತೆ ಹಚ್ಚುವುದು ಸುಲಭ. ಆದರೆ, ಇಂಟರ್ನೆಟ್ ಪ್ರೊಟೊಕಾಲ್ (ಐಪಿ) ವಿಳಾಸದ ವಿವರಗಳನ್ನು ಪಡೆಯುವುದು ಕಷ್ಟಕರ. ಏಕೆಂದರೆ ಮೇಲ್‌ಗಳನ್ನು ವರ್ಚುವಲ್ ಪ್ರೈವೇಟ್ ನೆಟ್‌ವರ್ಕ್ ಬಳಸಿ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದೇ ರೀತಿಯ ಬೆದರಿಕೆ ಇಮೇಲ್ ಗಳನ್ನು ಮಲೇಷಿಯಾದ 19 ಶಾಲೆಗಳಿಗೆ ಕಳುಹಿಸಲಾಗಿದೆ. ಪ್ರಸ್ತುತ ನಗರದ ಶಾಲೆಗಳಿಗೆ ರವಾನಿಸಲಾಗಿರುವ ಬೆದರಿಕೆ ಪತ್ರಗಳು ಇದೇ ರೀತಿಯದ್ದೇ ಆಗಿದೆ. ಒಂದು ವೇಳೆ ವಿಷಯ ಹಾಗೂ ಸರ್ವರ್ ಐಪಿ ವಿಳಾಸವನ್ನು ಬದಲಾಯಿಸಿದಿದ್ದರೆ, ಆರೋಪಿಗಳು ಅವರಿರುವ ಸ್ಥಳವನ್ನು ಬಹಿರಂಗಪಡಿಸದಂತಾಗುತ್ತಿತ್ತು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


