ಸದನಕ್ಕೆ ಬೇಗ ಬರುವ ಶಾಸಕರಿಗೆ ವಿಶೇಷ ಟೀ ಕಪ್ ಉಡುಗೊರೆ, ತಡವಾಗಿ ಬಂದವರಿಗೂ ಪ್ರಶಸ್ತಿ: ಯುಟಿ ಖಾದರ್
ವಿಧಾನಸಭಾ ಕಲಾಪದಲ್ಲಿ ಭಾಗವಹಿಸಲು ಶಾಸಕರನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸ್ಪೀಕರ್ ಯುಟಿ ಖಾದರ್ ಅವರು ಹೊಸ ಕ್ರಮವೊಂದನ್ನು ಘೋಷಿಸಿದ್ದಾರೆ. ಈ ಮೂಲಕ ಸದನಕ್ಕೆ ಬೇಗ ಬರುವ ಶಾಸಕರಿಗೆ ಇನ್ಮುಂದೆ ವಿಶೇಷ ಉಡುಗೊರೆ ಸಿಗಲಿದೆ.

ಬೆಳಗಾವಿ: ವಿಧಾನಸಭಾ ಕಲಾಪದಲ್ಲಿ ಭಾಗವಹಿಸಲು ಶಾಸಕರನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸ್ಪೀಕರ್ ಯುಟಿ ಖಾದರ್ ಅವರು ಹೊಸ ಕ್ರಮವೊಂದನ್ನು ಘೋಷಿಸಿದ್ದಾರೆ. ಈ ಮೂಲಕ ಸದನಕ್ಕೆ ಬೇಗ ಬರುವ ಶಾಸಕರಿಗೆ ಇನ್ಮುಂದೆ ವಿಶೇಷ ಉಡುಗೊರೆ ಸಿಗಲಿದೆ. ಅಲ್ಲದೆ, ತಡವಾಗಿ ಅಥವಾ ಗೈರಾದ ಸದಸ್ಯರಿಗೆ ಕೂಡ ಪ್ರಶಸ್ತಿ ನೀಡಲಾಗುತ್ತದೆ ಎಂದರು.
ನಾಳೆಯಿಂದ ಅಧಿವೇಶನ ಆರಂಭಗೊಳ್ಳಲಿರುವ ಹಿನ್ನೆಲೆ ಸುವರ್ಣ ವಿಧಾನಸೌಧದಲ್ಲಿ ವಿಧಾನಸಭೆ ಸಭಾಧ್ಯಕ್ಷ ಯು.ಟಿ ಖಾದರ್ ಹಾಗೂ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಜಂಟಿ ಸುದ್ದಿಗೋಷ್ಠಿ ನಡೆಸಿದರು.
ಈ ಕುರಿತು ಭಾನುವಾರ ಮಾತನಾಡಿದ ಖಾದರ್, ಕೋರಂ ಬೆಲ್ ಒತ್ತುವ ಮೊದಲು ವಿಧಾನಸಭೆ ಸಭಾಂಗಣಕ್ಕೆ ಪ್ರವೇಶಿಸುವ ಶಾಸಕರಿಗೆ ರಾಜ್ಯ ಮತ್ತು ರಾಷ್ಟ್ರದ ಲಾಂಛನಗಳೊಂದಿಗೆ ವಿನ್ಯಾಸಗೊಳಿಸಲಾದ ಟೀ ಕಪ್ ಮತ್ತು ಸಾಸರ್‌ಗಳನ್ನು ನೀಡಲಾಗುತ್ತದೆ. ಅತಿ ಹೆಚ್ಚು ಗೈರು ಆದವರಿಗೆ ಬೇಗ ಬರುವಂತೆ ಪ್ರಶಸ್ತಿ ನೀಡುತ್ತೇವೆ ಎಂದು ಹೇಳಿದರು.
ವಿಧಾನಸಭೆಯ ಹಾಜರಾತಿಯನ್ನು ಚುರುಕುಗೊಳಿಸಲು ನಾವು ಪ್ರಯತ್ನಿಸಬೇಕು. ಈ ಬಾರಿ ಅಧಿವೇಶನಕ್ಕೆ ಶಿಸ್ತುಬದ್ಧವಾಗಿ ಹಾಜರಾಗುವವರಿಗೆ ಪ್ರತಿನಿತ್ಯ ಟೀ ಕಪ್ ಮತ್ತು ಸಾಸರ್ ನೀಡಲಾಗುವುದು ಎಂದು ಖಾದರ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


